ಸಂಬಂಧಿಸಿದ ಅಧಿಕಾರಿಗಳಿಗೆ 2 ದಿನಗಳ ಗಡುವು ನೀಡಿದ್ದು, ಅಷ್ಟರೊಳಗೆ ದುರಸ್ತಿ ಕಾರ್ಯ ಆರಂಭಿಸದಿದ್ದರೆ ಸೇತುವೆ ರಸ್ತೆಯನ್ನು ತಡೆದು ಸ್ಥಳದಲ್ಲೇ ಅಡುಗೆ ಮಾಡುವ ಮೂಲಕ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಮಾತನಾಡಿ, ಸೇತುವೆಯ ಸುತ್ತ ಗಿಡಗಂಟಿಗಳು ಬೆಳೆದಿದ್ದರೂ ತೆರವುಗೊಳಿಸುವ ಕಾರ್ಯ ನಡೆಯುತ್ತಿಲ್ಲ. ಪ್ರತಿಭಟನೆ ನಡೆಸಿದಾಗ ಕಾಟಾಚಾರಕ್ಕೆ ಸುಣ್ಣಬಣ್ಣ ಬಳಿದು ಅಧಿಕಾರಿಗಳು ಕೈತೊಳೆದುಕೊಳ್ಳುತ್ತಿದ್ದಾರೆ, ಈ ರಸ್ತೆಯಲ್ಲಿ ಎರಡು ಸೇತುವೆಗಳಿದ್ದರೂ ವಾಹನ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸೇತುವೆಗೆ ಶಾಶ್ವತ ದುರಸ್ತಿ ಕೈಗೊಳ್ಳುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೇಲೂರು ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶತಮಾನ ಕಂಡಿರುವ ಯಗಚಿ ಹಳೇ ಸೇತುವೆ ಶಿಥಿಲಾವಸ್ಥೆ ತಲುಪುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಪಟ್ಟಣದ ಯಗಚಿ ಸೇತುವೆ ಬಳಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕರವೇ. ತಾಲೂಕು ಅಧ್ಯಕ್ಷ ಚಂದ್ರಶೇಖರ್, ನೂರಾರು ವರ್ಷಗಳ ಹಳೆಯ ಸೇತುವೆಯ ದುರಸ್ತಿಗೆ ಒತ್ತಾಯಿಸುತ್ತಿದ್ದರೂ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ದುರಸ್ತಿ ವಿಚಾರದಲ್ಲಿ ಪುರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಪರಸ್ಪರ ಜವಾಬ್ದಾರಿ ವರ್ಗಾಯಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ, ಸಂಬಂಧಿಸಿದ ಅಧಿಕಾರಿಗಳಿಗೆ 2 ದಿನಗಳ ಗಡುವು ನೀಡಿದ್ದು, ಅಷ್ಟರೊಳಗೆ ದುರಸ್ತಿ ಕಾರ್ಯ ಆರಂಭಿಸದಿದ್ದರೆ ಸೇತುವೆ ರಸ್ತೆಯನ್ನು ತಡೆದು ಸ್ಥಳದಲ್ಲೇ ಅಡುಗೆ ಮಾಡುವ ಮೂಲಕ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಮಾತನಾಡಿ, ಸೇತುವೆಯ ಸುತ್ತ ಗಿಡಗಂಟಿಗಳು ಬೆಳೆದಿದ್ದರೂ ತೆರವುಗೊಳಿಸುವ ಕಾರ್ಯ ನಡೆಯುತ್ತಿಲ್ಲ. ಪ್ರತಿಭಟನೆ ನಡೆಸಿದಾಗ ಕಾಟಾಚಾರಕ್ಕೆ ಸುಣ್ಣಬಣ್ಣ ಬಳಿದು ಅಧಿಕಾರಿಗಳು ಕೈತೊಳೆದುಕೊಳ್ಳುತ್ತಿದ್ದಾರೆ, ಈ ರಸ್ತೆಯಲ್ಲಿ ಎರಡು ಸೇತುವೆಗಳಿದ್ದರೂ ವಾಹನ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸೇತುವೆಗೆ ಶಾಶ್ವತ ದುರಸ್ತಿ ಕೈಗೊಳ್ಳುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕರವೇ ಗೌರವ ಅಧ್ಯಕ್ಷ ಕುಮಾರ್, ಜಗದೀಶ್, ಉಪಾಧ್ಯಕ್ಷ ಹನೀಪ್, ಮಾಧ್ಯಮ ವಕ್ತಾರ ದಿನೇಶ್ ಬೆಳ್ಳಾವರ, ಕಾರ್ಯದರ್ಶಿ ಪ್ರಸನ್ನ, ಸಾಂಸ್ಕೃತಿಕ ಘಟಕದ ಅಧ್ಯಕ್ಷ ನರಸಿಂಹ ಸ್ವಾಮಿ, ಚಂದ್ರೇಗೌಡ, ಮದನ್, ರಮೇಶ್, ಮಹೇಶ್ ಗೌಡ, ಆನಂದ್ ಸೇರಿದಂತೆ ಇನ್ನಿತರರು ಹಾಜರಿದ್ದರು.