ಹೆಚ್ಚುವರಿ ಏಕಲವ್ಯ ವಸತಿ ಶಾಲೆ ಮಂಜೂರಾತಿಗೆ ಆಗ್ರಹ

| Published : Jun 27 2025, 12:48 AM IST

ಹೆಚ್ಚುವರಿ ಏಕಲವ್ಯ ವಸತಿ ಶಾಲೆ ಮಂಜೂರಾತಿಗೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಸಂಸದ ಗೋವಿಂದ ಕಾರಜೋಳ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿ ಚಿತ್ರದುರ್ಗ ಜಿಲ್ಲೆಗೆ ಮತ್ತೊಂದು ಏಕಲವ್ಯ ಶಾಲೆ ಮಂಜೂರು ಮಾಡಲು ಸಂಬಂಧಿಸಿದ ಸಚಿವರಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಚಿತ್ರದುರ್ಗ ಜಿಲ್ಲೆಗೆ ಹೆಚ್ಚುವರಿ ಏಕಲವ್ಯ ವಸತಿ ಶಾಲೆ ಮಂಜೂರು ಮಾಡಲು ಸಂಬಂಧಿಸಿದ ಸಚಿವರಿಗೆ ನಿರ್ದೇಶನ ನೀಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ದೆಹಲಿಯಲ್ಲಿ ನಡ್ಡಾ ಅವರನ್ನು ಭೇಟಿ ಮಾಡಿದ ಗೋವಿಂದ ಕಾರಜೋಳ, ಸುಮಾರು 4 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಡಗಳ ಜನರು ವಾಸಿಸುತ್ತಿರುವ ಚಿತ್ರದುರ್ಗ ಜಿಲ್ಲೆಗೆ ಹಾಲಿ ಇರುವ ಏಕಲವ್ಯ ವಸತಿ ಶಾಲೆ ಸಾಕಾಗುವುದಿಲ್ಲ. ಹಾಗಾಗಿ ಇದರ ಜತೆಗೆ ಇನ್ನೊಂದು ಹೆಚ್ಚುವರಿ ಏಕಲವ್ಯ ವಸತಿ ಶಾಲೆಯನ್ನು ಮಂಜೂರು ಮಾಡಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಿಗೆ ಶಿಫಾರಸ್ಸು ಮಾಡುವಂತೆ ವಿನಂತಿಸಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ಪರಿಶಿಷ್ಟ ಪಂಗಡಕ್ಕೆ ಸೇರಿದವರ ಜನಸಂಖ್ಯೆಯಿದೆ, ಅದರಲ್ಲೂ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗದ ಜನರು ವಾಸಿಸುತ್ತಿದ್ದಾರೆ, ಪರಿಶಿಷ್ಟ ವರ್ಗಗಳ ಮಕ್ಕಳೂ ಕೂಡ ಗುಣಮಟ್ಟದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು ಎನ್ನುವ ಆಶಯ ನನ್ನದಾಗಿದೆ. ಏಕಲವ್ಯ ವಸತಿ ಶಾಲೆಗೆ ಅಗತ್ಯವಾಗಿರುವ 15 ಎಕರೆ ಜಮೀನು ಗುರುತಿಸಲು ಈಗಾಗಲೇ ಕ್ರಮಕೈಗೊಂಡಿರುವುದಾಗಿ ಪತ್ರದಲ್ಲಿ ಸಂಸದರು ತಿಳಿಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ನವೀನ್‌ ಹಾಗೂ ಎನ್.ರವಿಕುಮಾರ್‌ ಉಪಸ್ಥಿತರಿದ್ದರು.