ಸಾರಾಂಶ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಬ್ಬು ಮತ್ತು ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಕೃಷಿತಜ್ಞ ಡಾ.ಸ್ವಾಮಿನಾಥನ್ ವರದಿಯಂತೆ ಪ್ರತಿ ಟನ್ ಕಬ್ಬಿಗೆ 5 ಸಾವಿರ ಮತ್ತು ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಣೆ ಮಾಡಬೇಕು.
ಕನ್ನಡಪ್ರಭ ವಾರ್ತೆ ಮದ್ದೂರು
ಕಬ್ಬು ಮತ್ತು ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.ಪಕ್ಷದ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ನೇತೃತ್ವದಲ್ಲಿ ಕಾರ್ಯಕರ್ತರು ಪುರಸಭೆ ಮುಂಭಾಗದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮೆರವಣಿಗೆ ಮೂಲಕ ಬಂದು ತಾಲೂಕ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಬ್ಬು ಮತ್ತು ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಕೃಷಿತಜ್ಞ ಡಾ.ಸ್ವಾಮಿನಾಥನ್ ವರದಿಯಂತೆ ಪ್ರತಿ ಟನ್ ಕಬ್ಬಿಗೆ 5 ಸಾವಿರ ಮತ್ತು ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿದರು.ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಕಬ್ಬಿಗೆ 9.5ರ ಇಳುವರಿ ಪ್ರಮಾಣದ ಆಧಾರದ ಮೇಲೆ 5 ಸಾವಿರ ಬೆಲೆ ನಿಗದಿ ಮಾಡದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ರೈತರಿಗೆ ವಂಚನೆ ಮಾಡುತ್ತಿವೆ ಎಂದು ದೂರಿದರು.
ಟನ್ ಕಬ್ಬಿಗೆ 9.55 ಪ್ರಮಾಣಕ್ಕೆ ಅನುಗುಣವಾಗಿ 3200 ರು. ಹಾಗೂ 10.5ರ ಇಳುವರಿ ಪ್ರಮಾಣದ ಕಬ್ಬಿಗೆ 3,300 ಬೆಲೆ ನಿಗದಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರೈತ ವಿರೋಧಿ ಧೋರಣೆ ವಿರುದ್ಧ ವೆಂಕಟಗಿರಿಯಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇನ್ನಾದರೂ ಎಚ್ಚೆತ್ತುಕೊಂಡು ಪ್ರತಿ ಟನ್ ಕಬ್ಬಿಗೆ ವೈಜ್ಞಾನಿಕವಾಗಿ 9.5ರ ಇಳುವರಿಗೆ ನಿಗದಿ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರ ಗೊಳಿಸುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಕೆ.ಎಂ.ಅನಿಲ್ ಕುಮಾರ್, ಉಪಾಧ್ಯಕ್ಷ ಬಿ.ಆನಂದ, ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಸುಶ್ಮಿತಾ, ಶರಾವತಿ, ಮುತ್ತುರಾಜು ಹಲವರು ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))