ಸಾರಾಂಶ
ಶೈಕ್ಷಣಿಕ ಉದ್ದೇಶಕ್ಕಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ತ್ವರಿತಗತಿಯಲ್ಲಿ ವಿತರಿಸಬೇಕೆಂದು ಒತ್ತಾಯಿಸಿ, ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶೈಕ್ಷಣಿಕ ಉದ್ದೇಶಕ್ಕಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ತ್ವರಿತಗತಿಯಲ್ಲಿ ವಿತರಿಸಬೇಕೆಂದು ಒತ್ತಾಯಿಸಿ, ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.ಈಗಾಗಲೇ 2025-26ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಬಹುತೇಕ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಮುಗಿಯುತ್ತಾ ಬಂದಿದೆ. ಆದರೆ, ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು ಸಕಾಲದಲ್ಲಿ ಸಿಗದೇ ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ ಪ್ರಮಾಣಪತ್ರಗಳನ್ನು ವಿಳಂಬಮಾಡದೆ ತ್ವರಿತಗತಿಯಲ್ಲಿ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ಸರ್ಕಾರದ ನಿಯಮಾವಳಿಗಳಂತೆ ಯಾವುದೇ ಶಾಲಾ-ಕಾಲೇಜಿನ ಪ್ರವೇಶಕ್ಕೆ, ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹಂಚಿಕೆಗೆ ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ. ಇದಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸಕಾಲ ನಿಯಮದಂತೆ 21 ದಿನ ಅವಕಾಶವಿದೆ. ಇದನ್ನೇ ನೆಪವಾಗಿಟ್ಟುಕೊಂಡು ಅಧಿಕಾರಿಗಳು ಜಾತಿ, ಆದಾಯ ಪ್ರಮಾಣಪತ್ರ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಿರುವ ದಾಖಲೆಗಳನ್ನು ಒದಗಿಸಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮಾಂತರ ಕ್ಷೇತ್ರದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ಪ್ರವೇಶ ಸಿಗದೆ, ಶಿಕ್ಷಣದಿಂದ ವಂಚಿತರಾಗುವ ಆತಂಕ ಎದುರಿಸುತ್ತಿದ್ದಾರೆ. ಹೀಗಾಗಿ ತಹಸೀಲ್ದಾರ್ ಕೂಡಲೇ ಕ್ರಮ ಕೈಗೊಂಡು, ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಸಂಬಂಧಿಸಿದ ನೌಕರರ ಸಭೆ ನಡೆಸಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಕ್ಕಾಗಿ ಜಾತಿ, ಆದಾಯ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಶೀಘ್ರವೇ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಎನ್. ಪ್ರವೀಣ್ ಕುಮಾರ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರವೀಣ್‌ಗೌಡ, ಶಶಿಕುಮಾರ್ ಕೆ.ಆರ್. ಭುವನರಾಜ್, ಪ್ರೀತಮ್, ಮಲವಗೊಪ್ಪ ಶಿವು, ಆಕಾಶ್, ವಿಷ್ಣು, ನಿಖಿಲ್, ಧನರಾಜ್ ಗೌಡ, ಅಶೋಕ್, ರಾಜೇಶ್, ಪ್ರಜ್ವಲ್ ಮತ್ತಿತರರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))