ಕನ್ನಡಪ್ರಭ ವಾರ್ತೆ ಬೆಳಗಾವಿ ಬಸವ ಮಂಟಪ ಕೃತಿಯ ವಿವಾದಿತ ಲೇಖಕ ರವಿ ಹಂಜ್ ಹಾಗೂ ಪತ್ರಕರ್ತ, ಪ್ರಕಾಶಕ ವಿಶ್ವೇಶ್ವರ ಭಟ್ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ ಬೆಳಗಾವಿ ಜಿಲ್ಲಾ ಘಟಕ ಹಾಗೂ ಲಿಂಗಾಯತ ಸಂಘಟನೆ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬಸವ ಮಂಟಪ ಕೃತಿಯ ವಿವಾದಿತ ಲೇಖಕ ರವಿ ಹಂಜ್ ಹಾಗೂ ಪತ್ರಕರ್ತ, ಪ್ರಕಾಶಕ ವಿಶ್ವೇಶ್ವರ ಭಟ್ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ ಬೆಳಗಾವಿ ಜಿಲ್ಲಾ ಘಟಕ ಹಾಗೂ ಲಿಂಗಾಯತ ಸಂಘಟನೆ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಬಸವ ಮಂಟಪ ಕೃತಿಯಲ್ಲಿ ಬಸವಣ್ಣನವರ ವಿಚಾರಧಾರೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ ಎಂದು ಆರೋಪಿಸಿದ ಸಂಘಟನೆಗಳ ಮುಖಂಡರು, ಲೇಖಕ ರವಿ ಹಂಜ್ ಮತ್ತು ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು. ರವಿ ಹಂಜ್ ಅವರ ಪಾಸ್ಪೋರ್ಟ್ ಜಪ್ತಿ ಮಾಡಿ, ಅಮೆರಿಕದ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಅಲ್ಲಿನ ಪೌರತ್ವ ರದ್ಧತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಡಾ.ಶಶಿಕಾಂತ ಪಟ್ಟಣ, ಈರಣ್ಣ ದಯಣ್ಣವರ, ನ್ಯಾಯವಾದಿ ಸುನಿಲ್ ಸಾಣಿಕೊಪ್ಪ, ಶಶಿಭೂಷಣ ಪಾಟೀಲ, ಸುಧಾ ಪಾಟೀಲ, ಆಶಾಲತಾ ಸೊಗಲದ, ರತ್ನಕ್ಕ ಸಾಣಿಕೊಪ್ಪ, ಸಂಗಮೇಶ ಅರಳಿ, ಸುರೇಶ ನರಗುಂದ, ರಮೇಶ ಕಳಸನ್ನವರ, ಸದಾಶಿವ ದೇವರಮನಿ, ಶಂಕರ ಗುಡಸ, ನಾಗನಗೌಡ, ಶ್ರೀರಂಗ ಜೋಶಿ ಸೇರಿದಂತೆ ಎರಡೂ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.