ಸಾರಾಂಶ
ಅಲೆಮಾರಿ ಸಮುದಾಯದ ಮುಖಂಡರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಮತ್ತು ಕಾರ್ಯದರ್ಶಿ ಆನಂದಕುಮಾರ್ ಅವರನ್ನು ಸ್ಥಾನಗಳಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಎಸ್‌ಸಿ-ಎಸ್‌ಟಿ ಬುಡಕಟ್ಟು ಮಹಾಸಭಾದ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹರಪನಹಳ್ಳಿ: ಅಲೆಮಾರಿ ಸಮುದಾಯದ ಮುಖಂಡರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಮತ್ತು ಕಾರ್ಯದರ್ಶಿ ಆನಂದಕುಮಾರ್ ಅವರನ್ನು ಸ್ಥಾನಗಳಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಎಸ್‌ಸಿ-ಎಸ್‌ಟಿ ಬುಡಕಟ್ಟು ಮಹಾಸಭಾದ ವತಿಯಿಂದ ತಹಸೀಲ್ದಾರ್ ಬಿ.ವಿ. ಗಿರೀಶ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಹಾಸಭಾದ ರಾಜ್ಯ ಕಾರ್ಯಾದ್ಯಕ್ಷ ವಿ. ಸಣ್ಣಅಜ್ಜಯ್ಯ ಮಾತನಾಡಿ, ಜು. 5ರಂದು ಮಾಜಿ ಸಚಿವ ಎಚ್. ಆಂಜನೇಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ 49 ಅಲೆಮಾರಿ ಸಮುದಾಯಗಳ ಒಳ ಮೀಸಲಾತಿ ಪೂರ್ವಭಾವಿ ಸಭೆಯಲ್ಲಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಮತ್ತು ಕಾರ್ಯದರ್ಶಿ ಆನಂದಕುಮಾರ್ ಅವರು ೪೯ ಸಮುದಾಯಗಳ ಮುಖಂಡರಿಗೆ ಏಕವಚನದಿಂದ ಅವಾಚ್ಯ ಪದಗಳಿಂದ ನಿಂದಿಸಿರುವುದು ಸಮುದಾಯದ ಮುಖಂಡರಿಗೆ ತುಂಬಾ ನೋವುಂಟು ಮಾಡಿದೆ. ಹಾಗಾಗಿ ಕೂಡಲೇ ಅವರನ್ನು ಅಧ್ಯಕ್ಷ-ಕಾರ್ಯದರ್ಶಿ ಸ್ಥಾನದಿಂದ ತೆಗೆದುಹಾಕಬೇಕು ಎಂದು ಆಗ್ರಹಿಸಿದರು.ತಾಲೂಕು ಅಂಬೇಡ್ಕರ್ ಸಂಘದ ಅಧ್ಯಕ್ಷ ನಿಚ್ಚವ್ವನಹಳ್ಳಿ ಭೀಮಪ್ಪ ಮಾತನಾಡಿ, ಸಣ್ಣ ಮತ್ತು ಅತಿ ಸಣ್ಣ ಸಮುದಾಯಗಳಿಗೆ ನ್ಯಾಯಬದ್ಧವಾದ ಸಮಾನತೆ ಸಿಗಬೇಕು ಎಂದರೆ ತಕ್ಷಣ ಗೂಂಡಾ ವರ್ತನೆ ತೋರಿರುವ ನಿಗಮದ ಅಧ್ಯಕ್ಷ-ಕಾರ್ಯದರ್ಶಿಯನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.
ವಿ. ಅಂಜಿನಪ್ಪ, ವೈ. ಶೇಖರ, ಸಣ್ಣಚೌಡಪ್ಪ, ವಿಜಯ, ನಾಗರಾಜ, ಭೀಮಪ್ಪ, ಬಿ. ಮಾರುತಿ, ಸಣ್ಣಸ್ವಾಮಿ, ಮೈಲಾರಿ, ಹನುಮಂತ, ಸುಂಕಪ್ಪ, ಕೆ. ಮಾರುತಿ, ವೈ. ಅಂಜಿನಪ್ಪ, ಹನುಮಂತ, ಚೆನ್ನಪ್ಪ ಇದ್ದರು.