ಗ್ರಾಮ ಆಡಳಿತಾಧಿಕಾರಿಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹ

| Published : Sep 24 2024, 01:46 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಬಲೇಶ್ವರ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಬಬಲೇಶ್ವರದಲ್ಲಿ ತಹಸೀಲ್ದಾರ್‌ರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಬಲೇಶ್ವರ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಬಬಲೇಶ್ವರದಲ್ಲಿ ತಹಸೀಲ್ದಾರ್‌ರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ರಾಘವೇಂದ್ರ ಭಜಂತ್ರಿ ಮಾತನಾಡಿ, ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ನೆಟ್, ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದಾರೆ. ಇದರಿಂದ ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವುಗಳು ಸಂಭವಿಸುತ್ತಿವೆ ಎಂದು ದೂರಿದರು.

ನಿರಂತರವಾಗಿ ಮಾರಣಾಂತಿಕ ಹಲ್ಲೆ ನಡೆಯುತ್ತಿದೆ. ಎಲ್ಲಾ ಮೊಬೈಲ್ ಆಪ್‌ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗಿರುತ್ತದೆ ಎಂದು ಅಳಲು ತೋಡಿಕೊಂಡರು.

ಗ್ರಾಮ ಆಡಳಿತ ಅಧಿಕಾರಿ ಎಚ್.ಡಿ ಆಲಗೂರ ಮಾತನಾಡಿ, ಸೆ.26ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗುವುದು. ಸಮೂಹದ ಬೇಡಿಕೆಗಳನ್ನು ಈಡೇರಿಸಿ ಉತ್ತಮ ಮತ್ತು ಗುಣಮಟ್ಟದ ಸಾರ್ವಜನಿಕ ಮತ್ತು ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.ಗೌರವಾಧ್ಯಕ್ಷ ವಿ.ಎಸ್.ಪುರಾಣಿಕಮಠ, ರಾಜಕುಮಾರ ಅಂಬಿ, ವಿ.ಬಿ.ಅರಬಿ, ಆರ್‌.ಎಂ.ಬಂಡಿ, ಎ.ಬಿ.ಸಿಂಗಿ, ಎಸ್.ಕೆ.ಪೂಜೇರಿ, ಕೆ‌.ವೈ ಚಾಂಬರ, ಡಿ.ಬಿ.ಗಸ್ತಿ ಮುಂತಾದವರು ಇದ್ದರು.