ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ

| Published : Sep 27 2024, 01:22 AM IST

ಸಾರಾಂಶ

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಎನ್ ಪಿಎಸ್ ನೌಕರರ ಸಂಘದಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ತಾಲೂಕು ಆಡಳಿತ ಸೌಧದ ಆವರಣದಲ್ಲಿ ಗುರುವಾರ ಮನವಿ ಸಲ್ಲಿಸಿರುವ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ನೀಡಿದ್ದ ಭರವಸೆಯಂತೆ ಹಳೆ ಪಿಂಚಣಿ ವ್ಯವಸ್ಥೆ ಕೂಡಲೇ ಜಾರಿಗೆ ತರಬೇಕು. ಹಳೆ ಪಿಂಚಣಿ ವ್ಯವಸ್ಥೆ ಮರು ಸ್ಥಾಪನೆಗಾಗಿ ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಇದರಿಂದಾಗಿ ನೌಕರರು ಅನ್ಯಾಯಕ್ಕೊಳಗಾಗುತ್ತಿದ್ದಾರೆ ಎಂದು ದೂರಿದ್ದಾರೆ.

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ದೆಹಲಿಯಲ್ಲಿ ಇತ್ತೀಚೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ನೌಕರರ ಸಂಘದ ಸಭೆ ನಡೆಸಿ ಕೇಂದ್ರ ಸರ್ಕಾರ ಹಳೆ ಪಿಂಚಣಿ ವ್ಯವಸ್ಥೆ ಬದಲಿಗೆ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಇದೂ ಸಹ ಷೇರು ಮಾರುಕಟ್ಟೆ ಆಧಾರಿತವಾಗಿದೆ. ನೌಕರರ ಸಂಧ್ಯಾ ಕಾಲದ ಬದುಕಿಗೆ ಭದ್ರತೆ ಒದಗಿಸುವ ಅಂಶಗಳು ಇದರಲ್ಲಿ ಇಲ್ಲದಾಗಿವೆ. ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಏಕಿಕೃತ ಪಿಂಚಣಿ ವ್ಯವಸ್ಥೆ ಹಿಂಪಡೆದು ರಾಜ್ಯದಲ್ಲಿ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ನಾಗಭೂಷಣರೆಡ್ಡಿ, ಗೌರವಾಧ್ಯಕ್ಷ ಕೆ.ಎಸ್. ತಿಪ್ಪೇಸ್ವಾಮಿ, ಕಾರ್ಯದರ್ಶಿ ನವೀನ್ ಕುಮಾರ್, ನೌಕರರಾದ ನೀಲರಾಜ್, ಮುರುಗೇಶ್, ಚಂದ್ರಶೇಖರ, ಗಿರೀಶ್ ಬಾಬು, ಟಿಎಂ. ಅಶೋಕ್, ಜೆ. ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಶೋಕ್, ಕರಿ ಬಸಣ್ಣ, ವಾಲೇಕರ್, ಆನಂದ್ ಸೇರಿದಂತೆ ಇತರರು ಇದ್ದರು.