ಎಚ್.ಡಿ.ಕುಮಾರಸ್ವಾಮಿ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

| Published : Apr 19 2024, 01:01 AM IST

ಎಚ್.ಡಿ.ಕುಮಾರಸ್ವಾಮಿ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಮಹಿಳಾ ಬ್ಲಾಕ್ ಕಾಂಗ್ರೆಸ್‌ನಿಂದ, ರಾಜ್ಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ವಿವಾದಾಸ್ಪದ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ತರೀಕೆರೆ ತಹಶೀಲ್ದಾರ್ ರವರ ಮೂಲಕ ರಾಜ್ಯ ಮುಖ್ಯ ಚುನಾವಣಾ ಆಯುಕ್ತರು, ರಾಜ್ಯಪಾಲರನ್ನು ಒತ್ತಾಯಿಸಲಾಯಿತು.

ಚುನಾವಣಾ ಪ್ರಚಾರ ಸಭೆಯಲ್ಲಿ ನಾಡಿನ ಹೆಣ್ಣು ಮಕ್ಕಳಿಗೆ ಅವಮಾನ: ಆರೋಪ

ಕನ್ನಡಪ್ರಭ ವಾರ್ತೆ, ತರೀಕೆರೆ

ಮಹಿಳಾ ಬ್ಲಾಕ್ ಕಾಂಗ್ರೆಸ್‌ನಿಂದ, ರಾಜ್ಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ವಿವಾದಾಸ್ಪದ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ತರೀಕೆರೆ ತಹಶೀಲ್ದಾರ್ ರವರ ಮೂಲಕ ರಾಜ್ಯ ಮುಖ್ಯ ಚುನಾವಣಾ ಆಯುಕ್ತರು, ರಾಜ್ಯಪಾಲರುರನ್ನು ಒತ್ತಾಯಿಸಲಾಯಿತು.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಚೆನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಶಾಸಕ ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ನೀಡಿ ನಾಡಿನ ಹೆಣ್ಣು ಮಕ್ಕಳನ್ನು ಅವಮಾನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆ ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗಿದೆ. ಇದನ್ನು ಸಹಿಸಲಾಗದ ಎಚ್.ಡಿ. ಕುಮಾರ ಸ್ವಾಮಿ ತಾವೊಬ್ಬ ಜವಾಬ್ದಾರಿಯುತ ರಾಜಕಾರಿಣಿ ಎಂಬುದನ್ನು ಮರೆತು ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಹಾಗೂ ತರೀಕೆರೆ ಮತ್ತು ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಇಂತಹ ಅಸಂಬದ್ಧ ಹೇಳಿಕೆ ನೀಡಿದ ಎಚ್.ಡಿ.ಕುಮಾರಸ್ವಾಮಿಯವರ ಮೇಲೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಶಾಸಕ ಸ್ಥಾನದಿಂದ ವಜಾಗೊಳಿಸಿ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಂತೆ ಒತ್ತಾಯಿಸುತ್ತೇವೆ.ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್, ತರೀಕೆರೆ ಮತ್ತು ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಎಲ್ಲಾ ಸರ್ವ ಸದಸ್ಯರು, ಕಾರ್ಯಕರ್ತರು ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ. ಆದಕ್ಕೆ ಆಸ್ಪದ ನೀಡದೆ ತಾವು ಸೂಕ್ತ ಕ್ರಮ ಕೈಗೊಳ್ಳುವಿರಿ ಎಂದು ಭಾವಿಸುತ್ತೇವೆ ಎಂದಿದ್ದಾರೆ.ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಭಾಗ್ಯಲಕ್ಷ್ಮಿ, ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಹೇಮಲತ ರೇವಣ್ಣ, ವಿಜಯಬಾಯಿ, ಪುರಸಭೆ ಉಪಾಧ್ಯಕ್ಷೆ ದಿವ್ಯ ರವಿ, ಪುರಸಭೆ ಸದಸ್ಯೆ ಗಿರಿಜಾ ಪ್ರಕಾಶ್ ವರ್ಮ, ಪಾರ್ವತಮ್ಮ,ವಿಜಯ ಬಾಯಿ ಮತ್ತಿತರರು ಭಾಗವಹಿಸಿದ್ದರು.

18ಕೆಟಆರ್.ಕೆ.4ಃ

ತರೀಕೆರೆಯಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್ ನಿಂದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಲಾಯಿತು.