ಮೂಲಭೂತ ಸವಲತ್ತು ನೀಡಲು ಅಂಗಡಿ ಗ್ರಾಮಸ್ಥರ ಆಗ್ರಹ

| Published : May 16 2024, 12:45 AM IST

ಸಾರಾಂಶ

ಚಿಕ್ಕಮಗಳೂರುಮೂಡಿಗೆರೆ ತಾಲೂಕು ಹಂತೂರು ಗ್ರಾಪಂ ವ್ಯಾಪ್ತಿಯ ಅಂಗಡಿ ಗ್ರಾಮದ ಆದಿವಾಸಿ ಬಡಾವಣೆಗೆ ಹಕ್ಕುಪತ್ರ ಹಾಗೂ ಕುಡಿಯುವ ನೀರು ಇತರೆ ಮೂಲಭೂತ ಸೌಲಭ್ಯ ನೀಡುವಂತೆ ಒತ್ತಾಯಿಸಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ನ ಮೂಡಿಗೆರೆ ಘಟಕದಿಂದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಮೂಡಿಗೆರೆ ಘಟಕದಿಂದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ಗೆ ಮನವಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮೂಡಿಗೆರೆ ತಾಲೂಕು ಹಂತೂರು ಗ್ರಾಪಂ ವ್ಯಾಪ್ತಿಯ ಅಂಗಡಿ ಗ್ರಾಮದ ಆದಿವಾಸಿ ಬಡಾವಣೆಗೆ ಹಕ್ಕುಪತ್ರ ಹಾಗೂ ಕುಡಿಯುವ ನೀರು ಇತರೆ ಮೂಲಭೂತ ಸೌಲಭ್ಯ ನೀಡುವಂತೆ ಒತ್ತಾಯಿಸಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ನ ಮೂಡಿಗೆರೆ ಘಟಕದಿಂದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಅಂಗಡಿ ಗ್ರಾಮದ ಆದಿವಾಸಿ ಸಮುದಾಯದ ನಿವಾಸಿಗಳು ಸರ್ವೇ ನಂ. 55 ರಲ್ಲಿ ಗುಡಿಸಲು ನಿರ್ಮಿಸಿಕೊಂಡು ಕಳೆದ ಹಲವು ವರ್ಷಗಳಿಂದ ವಾಸವಾಗಿದ್ದೇವೆ. ಮೂಲತಃ ಹಸಲರ ಜನಾಂಗದ ಕುಟುಂಬಗಳು ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ವಾಸಿಸುತ್ತಿರುವ ಸ್ಥಳ ಗೋಮಾಳದ ಜಮೀನಾಗಿದ್ದು ಆ ಭೂಮಿಯನ್ನು ಆಶ್ರಯ ನಿವೇಶನಕ್ಕೆಂದು ಪಂಚಾಯಿತಿಯಲ್ಲಿ ಕಾಯ್ದಿರಿಸಲಾಗಿದೆ.ಆ ಭೂಮಿಯಲ್ಲಿ ಸುಮಾರು 25 ಕುಟುಂಬಗಳು ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದು ನಾವು ವಾಸಿಸುತ್ತಿರುವ ಜಾಗಕ್ಕೆ ಹಕ್ಕುಪತ್ರ ಮತ್ತು ಮೂಲಭೂತ ಸೌಕರ್ಯದ ಜೊತೆಗೆ ಕುಡಿಯುವ ನೀರು ಒದಗಿಸಬೇಕೆಂದು ಮನವಿಯಲ್ಲಿ ಕೋರಿದ್ದಾರೆ.ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅದಿವಾಸಿ ರಕ್ಷಣಾ ಪರಿಷತ್‌ನ ಮೂಡಿಗೆರೆ ಘಟಕದ ಅಧ್ಯಕ್ಷ ವಿಜಯೇಂದ್ರ, ಗ್ರಾಪಂ ಚಂದ್ರೇಶ್, ನಿವಾಸಿಗಳಾದ ಹರೀಶ್, ಶ್ರೀನಾಥ್, ಕೇಶವ, ಉಮೇಶ್,ಸುಬ್ಬು ಇದ್ದರು.

ಪೋಟೋ ಫೈಲ್‌ ನೇಮ್‌ 15 ಕೆಸಿಕೆಎಂ 1

ಮೂಡಿಗೆರೆ ತಾಲೂಕಿನ ಹಂತೂರು ಗ್ರಾಪಂ ವ್ಯಾಪ್ತಿಯ ಅಂಗಡಿ ಗ್ರಾಮದ ಆದಿವಾಸಿ ಬಡಾವಣೆಗೆ ಹಕ್ಕುಪತ್ರ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ನೀಡುವಂತೆ ಒತ್ತಾಯಿಸಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ನ ಮೂಡಿಗೆರೆ ಘಟಕದಿಂದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಗೆ ಮನವಿ ಸಲ್ಲಿಸಲಾಯಿತು.