ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ

| Published : Aug 20 2024, 12:58 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್‌ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್‌ ಆಗ್ರಹಿಸಿದರು.

ಬೆಳಗಾವಿ ನಗರದ ಧರ್ಮನಾಥ ಭವನದ ಹತ್ತಿರ ಭಾರತೀಯ ಜನತಾ ಪಕ್ಷ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನೂತನ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶ ನೀಡಿದ್ದಾರೆ. ಆದರೆ, ರಾಜ್ಯಪಾಲರನ್ನು ಕಾಂಗ್ರೆಸ್‌ ಅಪಮಾನ ಮಾಡುವ ಕೆಲಸ ಮಾಡುತ್ತಿದೆ. ಸಾಂವಿಧಾನಿಕ ಹುದ್ದೆಗೆ ಕುಂದು ತರುವ ಮಾಡುತ್ತಿದೆ. ಕೂಡಲೇ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ಮುಂಬರುವ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಎಂದರು.

ಮಾಜಿ ಸಂಸದೆ ಮಂಗಲ ಅಂಗಡಿ, ಮಾಚಿ ಸಚಿವ ಶ್ರೀಮಂತ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಜಗದೀಶ ಮೆಟಗುಡ್ಡ, ವಿ.ಐ. ಪಾಟೀಲ, ಅನಿಲ ಬೆನಕೆ ಇತರರು ಇದ್ದರು