ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಬಯಲಾಟ ಅಕಾಡೆಮಿ ಅಧ್ಯಕ್ಷರ ನೇಮಿಸಲು ಒತ್ತಾಯ

| Published : Oct 24 2025, 01:00 AM IST

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಬಯಲಾಟ ಅಕಾಡೆಮಿ ಅಧ್ಯಕ್ಷರ ನೇಮಿಸಲು ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಉತ್ತರ ಕರ್ನಾಟಕದ ಗಂಡು ಕಲೆಯಾಗಿರುವ ಬಯಲಾಟಕ್ಕೆ ಸಂಬಂಧಿಸಿದಂತೆ ಯಾವೊಬ್ಬ ತಜ್ಞರನ್ನು ಅಥವಾ ಬಯಲಾಟ ಅಕಾಡೆಮಿಯ ಅಧ್ಯಕ್ಷರನ್ನು 2024- 25ನೇ ಸಾಲಿನಲ್ಲಿ ಹಾಗೂ 2025-26ನೇ ಸಾಲಿನಲ್ಲಿಯೂ ಸಲಹಾ ಸಮಿತಿ ಸದಸ್ಯರನ್ನಾಗಿ ಮಾಡಿಲ್ಲ.

ಗದಗ: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಬಯಲಾಟ ಅಕಾಡೆಮಿಯ ಅಧ್ಯಕ್ಷರನ್ನು ನೇಮಕ ಮಾಡಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿಯಲ್ಲಿ ರಾಜ್ಯಾದ್ಯಂತ ವಿವಿಧ ಅಕಾಡೆಮಿಯ ಅಧ್ಯಕ್ಷರನ್ನು, ಸಾಹಿತಿ ಹಾಗೂ ಜಾನಪದ, ರಂಗಭೂಮಿ, ಮಾಧ್ಯಮ ವಿಭಾಗ, ವೈದ್ಯಕೀಯ ವಿಭಾಗ, ಸಂಗೀತ ನೃತ್ಯ ವಿಭಾಗ, ಚಿತ್ರಕಲೆ, ನ್ಯಾಯಾಂಗ ವಿಭಾಗ, ಕಿರುತೆರೆ, ಚಲನಚಿತ್ರ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಪದನಿಮಿತ್ಯ ಸದಸ್ಯರನ್ನು ಒಳಗೊಂಡಂತೆ ಎಲ್ಲ ವಿಭಾಗದ ತಜ್ಞರನ್ನು ಸಲಹಾ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

ಪ್ರತಿಯೊಂದು ವಿಭಾಗದಲ್ಲಿ 3ರಿಂದ 4 ಜನ ತಜ್ಞರನ್ನು ನೇಮಕ ಮಾಡಿದ್ದು, ಉತ್ತರ ಕರ್ನಾಟಕದ ಗಂಡು ಕಲೆಯಾಗಿರುವ ಬಯಲಾಟಕ್ಕೆ ಸಂಬಂಧಿಸಿದಂತೆ ಯಾವೊಬ್ಬ ತಜ್ಞರನ್ನು ಅಥವಾ ಬಯಲಾಟ ಅಕಾಡೆಮಿಯ ಅಧ್ಯಕ್ಷರನ್ನು 2024- 25ನೇ ಸಾಲಿನಲ್ಲಿ ಹಾಗೂ 2025-26ನೇ ಸಾಲಿನಲ್ಲಿಯೂ ಸಲಹಾ ಸಮಿತಿ ಸದಸ್ಯರನ್ನಾಗಿ ಮಾಡಿಲ್ಲ.

ಇದರಿಂದ ಉತ್ತರ ಕರ್ನಾಟಕದ ಗಂಡು ಕಲೆಯಾದ ಬಯಲಾಟ ಕಲೆಗೆ ಹಾಗೂ ಕಲಾವಿದರಿಗೆ ಅವಮಾನಿಸಿದಂತಾದೆ. ಬಯಲಾಟ ಅಕಾಡೆಮಿಯ ಅಧ್ಯಕ್ಷ ಕೆ.ಆರ್. ದುರ್ಗಾದಾಸ ಧಾರವಾಡ ಅವರನ್ನು ಕೂಡಲೇ ಸಲಹಾ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡುವಂತೆ ಮನವಿಯಲ್ಲಿ ಆಗ್ರಹಿಸಲಾಯಿತು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು, ಮುಂದಿನ ಕ್ರಮ ಜರುಗಿಸುವ ಭರವಸೆ ನೀಡಿದರು. ಈ ವೇಳೆ ಸುತಾರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಅಶೋಕ ಸುತಾರ, ರಾಮಚಂದ್ರ ಅರ್ಕಸಾಲಿ, ಮನೋಜಕುಮಾರ ಸುತಾರ, ಮಲ್ಲೇಶಗೌಡ ತಿಮ್ಮನಗೌಡ್ರ, ಶಂಕರಪ್ಪ ವಿ. ಬಡಿಗೇರ, ಸುಭಾಸ ಮಳಗಿ, ಸಿದ್ಧಲಿಂಗೇಶ್ವರ ಮುಳ್ಳಾಳ, ನಿಕಿತಾ ಸುತಾರ, ಸುಭಾಷ ಕದಡಿ, ರಂಗಪ್ಪ ಮಡ್ಡಿಕಾರ, ಬಾಳಪ್ಪ ಮನಗೂಳಿ, ಪ್ರಕಾಶ ಬೆಣಕಲ್ಲ, ಖಾಜೆಸಾಬ ನಾರಾಯಣಕೇರಿ, ವಿರುಪಾಕ್ಷಪ್ಪ ಕ್ಷೇತ್ರಿ, ಉಮೇಶ ನಾಯಕ, ಧರ್ಮಸಿಂಗ್ ಲಮಾಣಿ, ಗಣೇಶಸಿಂಗ್ ರಜಪೂತ, ರವಿಚಂದ್ರ ಕೊಳ್ಳಿ, ಶ್ರೀನಿವಾಸ ಹಡಪದ, ಕೇಶಪ್ಪ ಗೊಂದಕರ, ಸುರೇಶ ಬಡಿಗೇರ, ಗವಿಯಪ್ಪ ಮಾದನೂರ ಸೇರಿದಂತೆ ಇತರರು ಇದ್ದರು.