ಖಾಸಗಿ ಫೈನಾನ್ಸ್ ಕಿರುಕುಳ ತಪ್ಪಿಸಲು ಆಗ್ರಹ

| Published : Jan 24 2025, 12:45 AM IST

ಸಾರಾಂಶ

ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ ಉಪಟಳ ತಪ್ಪಿಸಬೇಕು, ಆರೋಗ್ಯ ಸೇವೆಗಾಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಬೆಳಗಾವಿ: ಜಿಲ್ಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ ಉಪಟಳ ತಪ್ಪಿಸಬೇಕು, ಆರೋಗ್ಯ ಸೇವೆಗಾಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಬೆಳಗಾವಿ ತಾಲೂಕಿನ ಯಮನಾಪುರ ಗ್ರಾಮದ ನಿವಾಸಿಗಳು, ಖಾಸಗಿ ಫೈನಾನ್ಸ್‌ ಗಳ ಕಿರುಕುಳ ತಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಒದಗಿಸುವಂತೆ ಒತ್ತಾಯಿಸಿದರು. ಅಪಾರ ಸಂಖ್ಯೆಯಲ್ಲಿ ಸೇರಿದ ಮಹಿಳೆಯರು ತಮಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು. ಮಹರ್ಷಿ ವಾಲ್ಮೀಕಿ ಮಹಿಳಾ ಸ್ವ- ಸಹಾಯ ಸಂಘದ ಮೂಲಕ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ, ಖಾಸಗಿ ಫೈನಾನ್ಸ್‌ಗಳಿಂದ ಸಾಲ ನೀಡಿದ್ದರು. ಈಗ ಯಾವುದೇ ಸಬ್ಸಿಡಿ ನೀಡದೆ ವಂಚಿಸಿದ್ದಾರೆ. ಆದರೆ, ಖಾಸಗಿ ಫೈನಾನ್ಸ್ನವರು ಪ್ರತಿ ದಿನ ಮನೆಗೆ ಬಂದು, ಹಣ ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.