ಹಾವೇರಿ: ಸೇವಾನಿರತ ಶಿಕ್ಷಕರಿಗೆ ಟಿಇಟಿ (ಪರೀಕ್ಷೆ) ಕಡ್ಡಾಯಗೊಳಿಸಿರುವುದನ್ನು ರದ್ದುಪಡಿಸಿ, ಶಿಕ್ಷಕರಿಗೆ ಸೇವಾಭದ್ರತೆ ಒದಗಿಸುವಂತೆ ಒತ್ತಾಯಿಸಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಪ್ರವಾಸಿ ಮಂದಿರಕ್ಕೆ ಶನಿವಾರ ಆಗಮಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ಶಿಕ್ಷಕರು, ಸೇವಾ ನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಸಂಸತ್ತಿನಲ್ಲಿ ಕಾಯಿದೆ ಮೂಲಕ ತಿದ್ದುಪಡಿ ಮಾಡಿ ರದ್ದುಗೊಳಿಸಬೇಕು. ಸಂಸತ್ತಿನಲ್ಲಿ ಈ ಕುರಿತು ಚರ್ಚಿಸುವಂತೆ ಹಕ್ಕೊತ್ತಾಯವನ್ನು ಮಂಡಿಸಿದರು.ಈ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಹಕಾರ್ಯದರ್ಶಿ ಪ್ರಮೀಳಾ ಕಾಮನಹಳ್ಳಿ, ಜಿಲ್ಲಾಧ್ಯಕ್ಷ ಜಗದೀಶ ಜೋಗಿಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಡೆಪ್ಪ ಕಂತಿ, ಮಹಿಳಾ ಉಪಾಧ್ಯಕ್ಷೆ ಅನ್ನಪೂರ್ಣ ಬಣಕಾರ, ಜಿಲ್ಲಾ ಸಹಕಾರ್ಯದರ್ಶಿ ಸುಮಾ ಆರ್., ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಯೋಗಿ ಆಲದಕಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುನೀತಾ ಪೂಜಾರ, ಸಂಘಟನೆಯ ಪದಾಧಿಕಾರಿಗಳಾದ ಸತೀಶ ಶಂಕಿನದಾಸರ, ಮೌನೇಶ ಕರೆಮ್ಮನವರ, ಸಿ.ಡಿ. ಕರಿಯಣ್ಣನವರ, ಬಸವರಾಜ ಧೂಳೆಹೊಳಿ, ನಾಗರಾಜ ದೇವಾಂಗದ, ಪಿ.ಎಸ್.ಸಾಲಿ, ರಮೇಶ ಪೂಜಾರ, ಉಮೇಶ ಸವಣೂರು, ಮಕಬೂಲ್ ಲಿಂಗದಹಳ್ಳಿ, ಚಂದ್ರು ಸಣ್ಣಗೌಡ, ಎಸ್.ಎಂ. ಕರಿಗಾರ, ರಮೇಶ ನಿಗದಿ, ಎಸ್.ವಿ.ಹಿರೇಮಠ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಸಂಘಗಳ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.