ಸಾರಾಂಶ
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ರಸ್ತೆ ಬದಿಗಳಲ್ಲಿ ಒಣಗಿ ನಿಂತ ಮರಗಳ ಕೊಂಬೆಗಳನ್ನು ತಕ್ಷಣ ಕಡಿಯುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದೆ. ಅರಣ್ಯ ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿದ ಸಂಘಟನೆ ರಾಜ್ಯಾಧ್ಯಕ್ಷ ಸೋಮಾ ನಾಯಕ್ ಈ ಸಂಬಂಧ ಮನವಿ ಸಲ್ಲಿಸಿದರು.

ಜಿಲ್ಲೆಯಾದ್ಯಂತ ರಸ್ತೆ ಬದಿಗಳಲ್ಲಿ ಹಾಗೂ ವಿವಿಧ ಕಚೇರಿಗಳು ಮತ್ತು ಕಟ್ಟಡಗಳ ಆವರಣದಲ್ಲಿರುವ ಮರಗಳಲ್ಲಿ ಕೊಂಬೆಗಳು ಬೃಹದಾಕಾರವಾಗಿ ಬೆಳೆದು ನಿಂತಿವೆ. ಇದೀಗ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಗಾಳಿ ಮಳೆಗೆ ಕೊಂಬೆಗಳು ಮುರಿದು ಬಿದ್ದು ಅನಾಹುತಗಳು ಸಂಭವಿಸಿ ಆಸ್ತಿ ಹಾನಿ ಪ್ರಾಣ ಹಾನಿ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮರದ ಕೊಂಬೆಗಳ ಕಡಿಯಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಒತ್ತಾಯಿಸಿ ದರು.ಅರಣ್ಯ ಇಲಾಖೆಗೆ ಸೇರಿದ ಭೂಮಿ ವಿಷಯದಲ್ಲಿ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 20 ಕೆಸಿಕೆಎಂ 4ರಸ್ತೆ ಬದಿಯಲ್ಲಿ ಒಣಗಿ ನಿಂತಿರುವ ಮರಗಳ ಕೊಂಬೆಗಳನ್ನು ಕಡಿಯುವಂತೆ ಆಗ್ರಹಿಸಿ ಕರ್ನಾಟಕ ಮಾಹಿತಿ ಹಕ್ಕು ಕಾರ್ಯ ಕರ್ತರ ಸಂಘಟನೆ ರಾಜ್ಯಾಧ್ಯಕ್ಷ ಸೋಮಾನಾಯಕ್ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ.