ಶಿರಹಟ್ಟಿ: ಗೋಮಾತೆಯನ್ನು ರಾಷ್ಟ್ರಮಾತೆ ಎಂದು ಘೋಷಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಸಂಘಟನೆ ಅಧ್ಯಕ್ಷ ಸಂತೋಷ ಕುರಿ ಮಾತನಾಡಿ, ಗೋಮಾತೆಗೆ ರಾಷ್ಟ್ರಮಾತೆಯ ಸ್ಥಾನಮಾನ ನೀಡಬೇಕು. ಗೋವು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು, ಕೃಷಿ ಹಾಗೂ ಹಾಲು ಉತ್ಪಾದನೆಯ ಮೂಲಕ ಜನರ ಜೀವನಕ್ಕೆ ಮಹತ್ವದ ಕೊಡುಗೆ ನೀಡುತ್ತದೆ. ಗೋಮಾತೆಯನ್ನು ರಾಷ್ಟ್ರಮಾತೆ ಎಂದು ಘೋಷಿಸುವುದು ಅಗತ್ಯವಾಗಿದೆ ಎಂದರು.ಗೋಮಾತೆಯನ್ನು ರಕ್ಷಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಉಳಿಸುವ ಕಾರ್ಯವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಗೋಹತ್ಯೆ ಸಂಪೂರ್ಣವಾಗಿ ನಿಷೇಧಿಸಿ ಗೋಸಂರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು. ಗೋವಿನಲ್ಲಿ ಮೂರು ಕೋಟಿ ದೇವತೆಗಳು ಇರುವುದಾಗಿ ಹಿಂದೂಗಳು ನಂಬುತ್ತಾರೆ. ರೈತರ ಜೀವನಕ್ಕೆ ಮುಖ್ಯ ಆಧಾರ ಗೋವುಗಳಾಗಿವೆ ಎಂದರು.ಮುಖಂಡರಾದ ನಾಗರಾಜ ಲಕ್ಕುಂಡಿ, ಫಕ್ಕೀರೇಶ ರಟ್ಟಿಹಳ್ಳಿ ಮಾತನಾಡಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುವುದಕ್ಕೆ ಭರವಸೆ ನೀಡಿದ ಇದುವರೆಗೆ ಆಡಳಿತ ನಡೆಸಿದ ಮುಖ್ಯಮಂತ್ರಿಗಳು ಜಾರಿಗೆ ತರದೇ ಇರುವುದು ದುರಂತದ ಸಂಗತಿಯಾಗಿದೆ. ಪ್ರತಿಯೊಂದು ಮನೆಯಲ್ಲೂ ಗೋವುಗಳನ್ನು ಸಾಕಾಣಿಕೆ ಮಾಡಬೇಕು. ಗೋವುಗಳನ್ನು ರಕ್ಷಿಸಬೇಕು. ಗೋಹತ್ಯೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಗೋಸಂತತಿಯನ್ನು ದೇಶದಲ್ಲಿ ಉಳಿಸಿಕೊಳ್ಳುವುದಕ್ಕೆ ಪ್ರಬಲವಾದ ಕಾನೂನು ಜಾರಿಗೆ ತಂದಲ್ಲಿ ಮಾತ್ರ ಸಾಧ್ಯ. ಆದ್ದರಿಂದ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಗೋ ಕಳ್ಳಸಾಗಣೆಯನ್ನು ಜಾಮೀನುರಹಿತ ಅಪರಾಧ ಎಂದು ಪರಿಗಣಿಸಿ ಅಜೀವ ಕಾರಾಗೃಹ ಶಿಕ್ಷೆ ವಿಧಿಸಬೇಕು. ಗೋಮಾತೆಯು ಕೇವಲ ಧಾರ್ಮಿಕ ಭಾವನೆಗಳ ವಿಷಯವಲ್ಲ. ಇದು ಆರ್ಥಿಕ, ಪರಿಸರ ಮತ್ತು ಸಾಮಾಜಿಕ ಸಮತೋಲನದ ಸಂಕೇತವಾಗಿದೆ. ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಗೋಮಾತೆಯ ಸಂರಕ್ಷಣೆ ಸಾಧ್ಯ. ಈ ನಿಟ್ಟಿನಲ್ಲಿ ಸಮಗ್ರ ನೀತಿ ರೂಪಿಸುವ ಅಗತ್ಯವಿದೆ ಎಂದು ಒತ್ತಾಯಿಸಿದರು.ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಸರ್ಕಾರದ ಪರವಾಗಿ ಮನವಿ ಸ್ವೀಕರಿಸಿದರು. ಮುಖಂಡರಾದ ಪರಶುರಾಮ ಡೊಂಕಬಳ್ಳಿ, ರಾಮಣ್ಣ ಕಂಬಳಿ, ಪ್ರವೀಣಗೌಡ ಪಾಟೀಲ, ಗೂಳಪ್ಪ ಕರಿಗಾರ, ರಾಜೀವರಡ್ಡಿ ಬಮ್ಮನಕಟ್ಟಿ, ಶ್ರೀನಿವಾಸ ಬಾರಬರ, ವೀರಣ್ಣ ಅಂಗಡಿ, ಮಲ್ಲಿಕಾರ್ಜುನ ಕಬಾಡಿ, ಬಸವರಾಜ ಕಲ್ಯಾಣಿ, ಮಹಾಂತೇಶ ಹಾದಿಮನಿ, ರಮೇಶ ಬಟ್ಟೂರ, ಆತ್ಮಾನಂದ ಅಬ್ಬಿಗೇರಿ, ರಮೆಶ ಶೇಳಕೆ, ಪ್ರಶಾಂತ ಕಂಬಳಿ, ಈರಣ್ಣ ತಳವಾರ, ಶಿವಾನಂದ ಕರಿಗಾರ, ಸಚಿನ್ ಆಲೂರ, ಮುತ್ತು ಚಕ್ರಸಾಲಿ, ವೀರನಗೌಡ ಪಾಟೀಲ, ಸಂತೋಷ ತೋಡೇಕಾರ ಇತರರು ಇದ್ದರು.ಗೋಮಾತೆಯನ್ನು ರಾಷ್ಟ್ರಮಾತೆ ಎಂದು ಘೋಷಿಸಲು ಆಗ್ರಹ
ಗೋಮಾತೆಯನ್ನು ರಕ್ಷಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಉಳಿಸುವ ಕಾರ್ಯವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.