ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಮಾಡಲಾಗುವುದು ಎಂದು ಸಂಘ ಎಚ್ಚರಿಸಿದೆ
ಹೊನ್ನಾವರ: ಹೊನ್ನಾವರ ತಾಲೂಕನ್ನು ಬರಪೀಡಿತವೆಂದು ಘೋಷಿಸಿ ರೈತರ ಸಾಲಮನ್ನಾ ಮಾಡಬೇಕೆಂದು ಭಾರತೀಯ ಕಿಸಾನ್ ಸಂಘದ ತಾಲೂಕು ಸಮಿತಿ ಆಗ್ರಹಿಸಿದೆ.ಬುಧವಾರ ತಹಸಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ತಾಲೂಕು ಕಿಸಾನ್ ಸಂಘದ ಮೂಲಕ ಮನವಿ ಸಲ್ಲಿಸಲಾಯಿತು. ಜಿಲ್ಲೆಯಲ್ಲಿ ವಾಡಿಕೆಯ ಮಳೆ ಕೊರತೆಯಿಂದ ರೈತರ ಬೆಳೆ ನಾಶವಾಗಿದ್ದು, ಸರ್ಕಾರ ಜಿಲ್ಲೆಯ ಕರಾವಳಿ ಮಲೆನಾಡು, ಅರೆ ಮಲೆನಾಡು ಪ್ರದೇಶದ ಕೆಲವು ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಬರ ಘೋಷಣೆ ಮಾಡಿದೆ. ಅದರ ಪೈಕಿ ಬರ ಘೋಷಣೆಯ ತಾಲೂಕುಗಳ ಪೈಕಿ ಹೊನ್ನಾವರ ತಾಲೂಕು ತಪ್ಪಿದ್ದು, ಕೂಡಲೇ ತಾಲೂಕನ್ನು ಬರಪೀಡಿತವೆಂದು ಘೋಷಿಸಬೇಕೆಂದು ಮನವಿ ತಿಳಿಸಲಾಗಿದೆ.
ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಮಾಡಲಾಗುವುದು ಎಂದು ಸಂಘ ಎಚ್ಚರಿಸಿದೆ.ಈ ವೇಳೆ ಗಣಪತಿ ಹೆಗಡೆ, ವಿನಾಯಕ ಹೆಗಡೆ, ಮಂಜುನಾಥ ಭಟ್ಟ, ಎಂ.ಆರ್. ಹೆಗಡೆ, ಸೀತಾರಾಮ ಹೆಗಡೆ, ವಿಷ್ಣು ಹೆಗಡೆ, ರಾಘವೇಂದ್ರ ಹೆಗಡೆ, ಸುಬ್ರಾಯ ಹೆಗಡೆ, ಶ್ರೀಧರ್ ಭಟ್, ಗೋಪಾಲ ನಾಯ್ಕ್, ಕಿರಣ್ ಹೆಗಡೆ ಮೊದಲಾದವರು ಇದ್ದರು.ಇಂದು ಹಳಿಯಾಳಕ್ಕೆ ಬಿಜೆಪಿ ಅಭ್ಯರ್ಥಿ ಸಂಕನೂರ ಭೇಟಿ
ಹಳಿಯಾಳ: ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ್ ಅವರು ಗುರುವಾರ ಹಳಿಯಾಳಕ್ಕೆ ಭೇಟಿ ನೀಡಿ ಮತಯಾಚನೆ ನಡೆಸಲಿದ್ದಾರೆ.ಗುರುವಾರ ಬೆಳಗ್ಗೆ 10 ಗಂಟೆಗೆ ಪಟ್ಟಣದ ವಿವಿಧ ಸಂಘ- ಸಂಸ್ಥೆಗಳಿಗೆ ಭೇಟಿ ನೀಡಿ ಪದವೀಧರ ಮತದಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಮಂಡಲ ಅಧ್ಯಕ್ಷ ವಿಠ್ಠಲ್ ಸಿದ್ದಣ್ಣವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಸಭೆಯಲ್ಲಿ ಮಾಜಿ ಶಾಸಕ ಸುನಿಲ್ ಹೆಗಡೆ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೆಕರ್ ಅವರು ಪಾಲ್ಗೊಳ್ಳಲಿದ್ದಾರೆ. ನಂತರ ಅವರು ದಾಂಡೇಲಿಗೆ ತೆರಳಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ ಘಟಕಾಂಬ್ಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.