ಭಾರತ ದೇಶದಲ್ಲಿ ಗೋ ಮಾಂಸ ರಫ್ತು ಹಾಗೂ ಜಾನುವಾರು ಹತ್ಯೆ ಸಂಪೂರ್ಣವಾಗಿ ನಿಷೇಧ ಮಾಡಬೇಕು. ಈ ನಿಟ್ಟಿನಲ್ಲಿ ದೇಶಾದ್ಯಂತ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಬೆಂಗಳೂರಿನ ವಿಶ್ವ ಗೋರಕ್ಷಾ ಮಹಾಪೀಠದ ಶ್ರೀಗಳು, ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪಕಾಧ್ಯಕ್ಷ ಶ್ರೀ ದಯಾನಂದ ಸ್ವಾಮೀಜಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಉಡುಪಿ: ಭಾರತ ದೇಶದಲ್ಲಿ ಗೋ ಮಾಂಸ ರಫ್ತು ಹಾಗೂ ಜಾನುವಾರು ಹತ್ಯೆ ಸಂಪೂರ್ಣವಾಗಿ ನಿಷೇಧ ಮಾಡಬೇಕು. ಈ ನಿಟ್ಟಿನಲ್ಲಿ ದೇಶಾದ್ಯಂತ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಬೆಂಗಳೂರಿನ ವಿಶ್ವ ಗೋರಕ್ಷಾ ಮಹಾಪೀಠದ ಶ್ರೀಗಳು, ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪಕಾಧ್ಯಕ್ಷ ಶ್ರೀ ದಯಾನಂದ ಸ್ವಾಮೀಜಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋಮಾಂಸ ಮತ್ತು ಚರ್ಮವನ್ನು ವಿದೇಶಗಳಿಗೆ ರಫ್ತು ಮಾಡುವುದು ನಮ್ಮ ದೇಶದ ಸನಾಮತ ಧರ್ಮ, ಸಂಸ್ಕೃತಿ, ಪರಂಪರೆಗೆ ಕಳಂಕವಾಗಿದೆ. ಗೋ ಮಾಂಸ ರಫ್ತಿನಿಂದ ದೇಶದಲ್ಲಿ ಗೋವು ಹಾಗೂ ಪ್ರಾಣಿಗಳ ಸಂತತಿ ಅತಿವೇಗವಾಗಿ ಕ್ಷೀಣಿಸುತ್ತಿದ್ದು, ಇದರಿಂದ ದೇಶದ ಅರ್ಥವ್ಯವಸ್ಥೆಗೆ ದೊಡ್ಡ ದುಷ್ಪರಿಣಾಮ ಬೀರಲಿದೆ ಎಂದರು.ಕೇವಲ ಗೋ ಮಾಂಸ ಮಾತ್ರವಲ್ಲ, ಭಾರತದಿಂದ ಯಾವುದೇ ಪ್ರಾಣಿಗಳ ಮಾಂಸ ಮತ್ತು ಚರ್ಮ ಹಾಗೂ ಮಾಂಸೋತ್ಪನ್ನಗಳ ರಫ್ತನ್ನು ಕಾನೂನಿನ ಮೂಲಕ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದರು. 28ರಂದು ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭಾರತವನ್ನು ಸಂಪೂರ್ಣ ಜಾನುವಾರು ಹತ್ಯೆ ಮುಕ್ತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಈ ಮೂಲಕ ಮನವಿ ಮಾಡುತ್ತೇನೆ ಎಂದವರು ಹೇಳಿದರು.