ರಾಜ್ಯ ಸರ್ಕಾರ 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗಳಿಗೆ ಸೀಮಿತವಾಗದೆ, ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾಗಿರುವ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
ಕಾರ್ಕಳ: ರಾಜ್ಯ ಸರ್ಕಾರ 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗಳಿಗೆ ಸೀಮಿತವಾಗದೆ, ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾಗಿರುವ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಸಾಧ್ಯಾಸಾಧ್ಯತೆಗಳ ಕುರಿತು ಬಿಜೆಪಿ ಸರ್ಕಾರದ ಅವಧಿಯಲ್ಲಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಡಾ. ಎಂ. ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.ಮೋಹನ್ ಆಳ್ವ ಸಮಿತಿ ಸಮಗ್ರ ಅಧ್ಯಯನ ನಡೆಸಿ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಕಾನೂನಾತ್ಮಕ ಹಾಗೂ ಸಾಂವಿಧಾನಿಕವಾಗಿ ಯಾವುದೇ ಅಡೆತಡೆಗಳಿಲ್ಲ ಎಂದು ಸ್ಪಷ್ಟಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಬಿಜೆಪಿ ಸರ್ಕಾರ ಈ ಕುರಿತು ಅಧಿಕೃತ ಘೋಷಣೆ ಮಾಡುವ ಹಂತದಲ್ಲಿದ್ದಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಘೋಷಣೆ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.