ಮಲಪ್ರಭಾ ಬಲದಂಡೆ ಕಾಲುವೆಯಲ್ಲಿ ಹೂಳು ತುಂಬಿ, ಜಾಲಿ ಕಂಟಿ ಬೆಳೆದಿದ್ದು, ನೀರಾವರಿ ನಿಗಮದ ಅಧಿಕಾರಿಗಳು ಕಾಲುವೆ ಸ್ವಚ್ಛತೆಗೆ ಮುಂದಾಗಬೇಕು.
ಕನ್ನಡಪ್ರಭ ವಾರ್ತೆ ನರಗುಂದ
ಮಲಪ್ರಭಾ ಬಲದಂಡೆ ಕಾಲುವೆಯಲ್ಲಿ ಹೂಳು ತುಂಬಿ, ಜಾಲಿ ಕಂಟಿ ಬೆಳೆದಿದ್ದು, ನೀರಾವರಿ ನಿಗಮದ ಅಧಿಕಾರಿಗಳು ಕಾಲುವೆ ಸ್ವಚ್ಛತೆಗೆ ಮುಂದಾಗಬೇಕೆಂದು ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.4028ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮಲಪ್ರಭಾ ಜಲಾಶಯದಿಂದ ನರಗುಂದ ಭಾಗಕ್ಕೆ ನೀರು ಪೂರೈಕೆ ಮಾಡುವ ಮಲಪ್ರಭಾ ಬಲದಂಡೆ ಕಾಲುವೆ ಸ್ವಚ್ಛವಾಗಿದ್ದವು, ಆದರೆ ಈ ಹಿಂದೆ ಎಚ್.ಕೆ. ಪಾಟೀಲರು ನೀರಾವರಿ ಸಚಿವರಿದ್ದಾಗ ಈ ನೀರಾವರಿ ಇಲಾಖೆಯನ್ನು ನೀರಾವರಿ ನಿಗಮ ಮಾಡಿದ ನಂತರ ಈ ಕಾಲುವೆ ಸಂಪೂರ್ಣ ಹಾಳಾಗಿವೆ. ಆದ್ದರಿಂದ ಸರ್ಕಾರ ಈ ಮಲಪ್ರಭಾ ಬಲದಂಡೆ ಕಾಲುವೆ ಸ್ವಚ್ಛತೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಕಾಲುವೆ ಹೂಳು ಮತ್ತು ಕಂಟಿ ತೆಗೆಸಿ ರೈತರ ಜಮೀನುಗಳಿಗೆ ನೀರು ಮುಟ್ಟಿಸುವ ಪ್ರಾಮಾಣಿಕ ಕೆಲಸ ಮಾಡಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭ ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ಸಿ.ಎಸ್. ಪಾಟೀಲ, ರಾಘವೇಂದ್ರ ಗುಜಮಾಗಡಿ, ಸುಭಾಸ ಗಿರಿಯಣ್ಣವರ, ಹನುಮಂತ ಸರನಾಯ್ಕರ, ಶಿವಪ್ಪ ಸಾತಣ್ಣವರ, ಫಕೀರಪ್ಪ ಅಣ್ಣಿಗೇರಿ, ಯಲ್ಲಪ್ಪ ಚಲವಣ್ಣವರ, ಚನ್ನಬಸಪ್ಪ ಆಯಿಟ್ಟಿ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಇತರರಿದ್ದರು.