ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡಿಸಿ ಹಾಗೂ ಉಗ್ರರ ಸರ್ವನಾಶಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆಗ್ರಹಿಸಿ ಬಜರಂಗದಳದ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.ಶುಕ್ರವಾರ ಸಂಜೆ ನಗರದ ಚಂಪಕ್ ವೃತ್ತದಿಂದ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡನೀಯವಾಗಿದ್ದು, ಕೇಂದ್ರ ಸರ್ಕಾರ ಇದಕ್ಕೆ ಕಾರಣರಾದ ನೀಚ ಉಗ್ರಗಾಮಿಗಳನ್ನು ಹುಡುಕಿ ಗುಂಡಿಕ್ಕಿ ಕೊಲ್ಲುವ ಮೂಲಕ ದೇಶದ ಶಕ್ತಿ ಏನೆಂಬುದನ್ನು ಪಾಪಿ ಪಾಕಿಸ್ತಾನಕ್ಕೆ ಮನದಟ್ಟು ಮಾಡಬೇಕು ಎಂದು ಆಗ್ರಹಿಸಿದರು.ಹಿಂದೂಗಳೇ ಟಾರ್ಗೆಟ್
ಇದು ಹಿಂದೂಗಳನ್ನು ದಮನ ಮಾಡುವ ಕೃತ್ಯವಾಗಿದೆ, ಕೇವಲ ಹಿಂದೂಗಳನ್ನೇ ಗುರಿಯಾಗಿಸಿ ಈ ಕೃತ್ಯ ನಡೆದಿರುವ ಕುರಿತು ವರದಿಯಾಗಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದ್ದು, ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಪೂರ್ಣ ಅಧಿಕಾರ ನೀಡಿ ಇಂತಹ ದೇಶದ್ರೋಹಿ, ಇಲ್ಲಿನ ಉಪ್ಪು ತಿಂದ ಮನೆಗೆ ದ್ರೋಹ ಬಗೆಯುವ ಪರಮ ನೀಚರನ್ನು ಮುಲಾಜಿಲ್ಲದೇ ಗುಂಡಿಟ್ಟುಕೊಲ್ಲಲು ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.ಈ ದಾಳಿಯಲ್ಲಿ ಕರ್ನಾಟಕದವರೂ ಬಲಿಯಾಗಿದ್ದಾರೆ, ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಅವಕಾಶ ಇರಲಿಲ್ಲ, ಕೇಂದ್ರದ ಮೋದಿ ಸರ್ಕಾರದ ದಿಟ್ಟ ಕ್ರಮದಿಂದ ೩೭೦ನೇ ವಿಧಿಯನ್ನು ತೆಗೆದು ಹಾಕಿ ಕಾಶ್ಮೀರ ಭಾರತದ ಅವಿಭಾಜ್ಯ ಭಾಗ ಎಂದು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿತ್ತು. ಇದನ್ನು ಸಹಿಸದೇ ಈ ಕೃತ್ಯ ನಡೆಸಲಾಗಿದೆ ಎಂದು ಕಿಡಿಕಾರಿದರು.ದೇಶದ್ರೋಹಿ ನೀತಿಗೆ ಸಾಕ್ಷಿರಾಜ್ಯದ ಕಾಂಗ್ರೆಸ್ ಶಾಸಕರೊಬ್ಬರು ೩೭೦ನೇ ವಿಧಿ ರದ್ದುಪಡಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದ ದೇಶದ್ರೋಹಿ ನೀತಿಗೆ ಸಾಕ್ಷಿಯಾಗಿದೆ ಎಂದು ಕಿಡಿಕಾರಿದರು.ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ದೇಶಪ್ರೇಮವಿದ್ದರೆ ತನ್ನದೇ ಪಕ್ಷದ ಶಾಸಕ ಇಂತಹ ಅಮಾನವೀಯ ಕೃತ್ಯ ನಡೆದಿರುವ ಸಂಧಿಗ್ದ ಸ್ಥಿತಿಯಲ್ಲಿ ನೀಡಿರುವ ಅಪ್ರಬುದ್ದ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು. ದೇಶದ ಜನತೆ ನಮ್ಮ ಸೇನೆಯ ಜತೆಗಿದ್ದು, ವಿಶ್ವಕ್ಕೆ ಭಾರತದ ಶಕ್ತಿ ತೋರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಜರಂಗದಳ ಬಾಲಾಜಿ, ಬಾಬು, ಅಪ್ಪಿ, ಬಿಜೆಪಿ ಮುಖಂಡರಾದ ವಿಜಯಕುಮಾರ್, ಜಯಂತಿಲಾಲ್, ಮಲ್ಲಿಕಾ ಪ್ರಕಾಶ್,ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅರುಣಮ್ಮ, ಮಂಜುನಾಥ್, ದಿಲೀಪ್.ಸಾಯಿಮೌಳಿ,ಸಾಯಿ ಸುಮನ್ ಮತ್ತಿತರರು ನೇತೃತ್ವ ವಹಿಸಿದ್ದರು.