. ಇ-ಸ್ವತ್ತು 2.0 ತಂತ್ರಾಂಶದಲ್ಲಿ ತಾಂತ್ರಿಕ ದೋಷಗಳನ್ನು ಸರಿಪಡಿಸುವಿಕೆ ಹಾಗೂ ತಂತ್ರಾಂಶವನ್ನು ಸಾರ್ವಜನಿಕರಿಗೆ ಅನುಕೂಲಕರ ರೀತಿಯಲ್ಲಿ ನಿಯಮಾವಳಿಗಳ ಸರಳೀಕರಿಸುವಂತೆ ಆಗ್ರಹಿಸಿ ನಗರದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ್ ಮೂಲಕ ಸಚಿವರುಗಳಾದ ಪ್ರಿಯಾಂಕ ಖರ್ಗೆ ಹಾಗೂ ಕೃಷ್ಣ ಬೈರೆಗೌಡ ಅವರಿಗೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು: ಇ-ಸ್ವತ್ತು 2.0 ತಂತ್ರಾಂಶದಲ್ಲಿ ತಾಂತ್ರಿಕ ದೋಷಗಳನ್ನು ಸರಿಪಡಿಸುವಿಕೆ ಹಾಗೂ ತಂತ್ರಾಂಶವನ್ನು ಸಾರ್ವಜನಿಕರಿಗೆ ಅನುಕೂಲಕರ ರೀತಿಯಲ್ಲಿ ನಿಯಮಾವಳಿಗಳ ಸರಳೀಕರಿಸುವಂತೆ ಆಗ್ರಹಿಸಿ ನಗರದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ್ ಮೂಲಕ ಸಚಿವರುಗಳಾದ ಪ್ರಿಯಾಂಕ ಖರ್ಗೆ ಹಾಗೂ ಕೃಷ್ಣ ಬೈರೆಗೌಡ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಮಾತನಾಡಿ, ಕರ್ನಾಟಕ ರಾಜ್ಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಅನುಕೂಲಕರ ರೀತಿಯಲ್ಲಿ, ಭ್ರಷ್ಟಾಚಾರ ರಹಿತ ಹಾಗೂ ಮಧ್ಯವರ್ತಿಗಳ ಹಾವಳಿಯಿಲ್ಲದೇ ತಮ್ಮ ಆಸ್ತಿಗಳನ್ನ ನೇರವಾಗಿ ನಿಗದಿತ ಅವಧಿಯೊಳಗೆ ನೋಂದಣಿ ಮಾಡಿಸಿಕೊಳ್ಳಲು ಹಾಗೂ ತಮ್ಮ ಅಸ್ತಿಗಳನ್ನು ಡಿಜಟಲಿಕರರಣಗೊಳಿಸಿಕೊಳ್ಳಲು ಇ-ಸ್ವತ್ತು 2.0 ತಂತ್ರಾಂಶವನ್ನು ಸಾರ್ವಜನಿಕರಿಗೆ ಪರಿಚಯಿಸಲಾಗಿದೆ. ಇದರ ಮೂಲಕ ಸಾರ್ವಜನಿಕರಿಗೆ ತಮ್ಮ ಆಸ್ತಿಗಳನ್ನ ನೋಂದಾಯಿಸಿಕೊಳ್ಳಲು ಹಕ್ಕು ಪತ್ರ, ವಿಲ್. ದಾನ ಪತ್ರ, ಸೆಲ್ ಡೀಡ್. ಹೀಗೆ ಕೆಲ ದಾಖಲಾತಿಗಳನ್ನು ನಿಗದಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಆದರೆ ಅನೇಕ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಇದು ಒಂದು ರೀತಿಯ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದಕ್ಕಾಗಿ ಸಂಬಂಧಿಸಿದ ಇಲಾಖೆ ಸಚಿವರುಗಳು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಜಾಧವ ಮಾತನಾಡಿ, ಕೆಲ ಗ್ರಾಮೀಣ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಹಲವಾರು ವರ್ಷಗಳಿಂದ ಬಳುವಳಿಯಾಗಿ ಬಂದಂತಹ ಪಿತ್ರಾರ್ಜಿತ ಆಸ್ತಿಗಳಿಗೆ ಹಾಗೂ ಸಹೋದರರೂ ಕೇವಲ ಒಪ್ಪಂದಗಳ ಮೂಲಕ ಹಂಚಿಕೊಂಡ ಆಸ್ತಿಗಳಿಗೆ ಯಾವುದೇ ಮೂಲ ನೋಂದಾಯಿತ ದಾಖಲೆ ಇಲ್ಲದಿರುವುದು ತೊಂದರೆಯಾಗಿದೆ. ಕೇವಲ ಗ್ರಾಮ ಪಂಚಾಯತಿಯ ಅಸ್ತಿ ದಾಖಲೆ ಇದ್ದರೂ ಕೂಡ ಅದನ್ನು ನೋಂದಾಯಿಸಲು ಸಾಧ್ಯವಾಗುತ್ತಿಲ್ಲ. ಖರೀದಿ ಪಾಲುವಿಭಾಗ ಅಸ್ತಿಗೆ ಸಾಲ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು. ತಾಲೂಕು ಅಧ್ಯಕ್ಷ ಚಂದ್ರಪ್ಪ ಬಣಕಾರ, ಪರಶುರಾಮ ಕುರುವತ್ತಿ, ರಿಯಾಜ್ ದೊಡ್ಡಮನಿ, ಶ್ರೀಧರ ಛಲವಾದಿ, ಗೋಪಿ ಕುಂದಾಪುರ, ಕೊಟ್ರೇಶ ದುಗ್ಗತ್ತಿ, ಬಸವರಾಜ ಸಾವಕ್ಕನವರ, ಶಂಕರ ಹಳ್ಳಪ್ಪನವರ, ಸಂತೋಷ ಡಿ, ಹನುಮಂತಪ್ಪ ಗಂಗಣ್ಣನವರ, ನಿಂಗಪ್ಪ ಬೀರಣ್ಣನವರ, ಸಂತೋಷ ಗಂಗಣ್ಣನವರ, ರಾಜಪ್ಪ ಮಡಿವಾಳರ ಮತ್ತಿತರರಿದ್ದರು.