ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ

| Published : Aug 25 2024, 01:46 AM IST

ಸಾರಾಂಶ

ರೈತ ಭಾರತ ಪಕ್ಷದ ಮಲ್ಲಿಕಾರ್ಜುನ ಕೆಂಗನಾಳರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಕನ್ನಡಪ್ರಭ ವಾರ್ತೆ ವಿಜಯಪುರ

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಭಾರತ ಪಕ್ಷ (ರಿ) ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಷ್ಟ್ರಾಧ್ಯಕ್ಷ ಮುತ್ತಪ್ಪ ಹೀರೆಕುಂಬಿ ಮಾತನಾಡಿ, ಆ.22 ರಂದು ರೈತರ ಸಮಸ್ಯೆಗಳ ಬಗ್ಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ರೈತ ಭಾರತ ಪಕ್ಷ (ರಿ) ವತಿಯಿಂದ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಹುಬ್ಬಳ್ಳಿಯ ಹೆಸ್ಕಾಂ ನಿಗಮ ಕಚೇರಿಯವರಿಗೆ ಹೆಸ್ಕಾಂ ಸ್ವಚ್ಛತೆ ಅಭಿಯಾನ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.ರೈತರಿಗೆ ಕೃಷಿಯ ಸಲುವಾಗಿ ಶೀಘ್ರ ಸಂಪರ್ಕ ಯೋಜನೆಯನ್ನು ಜಾರಿ ಮಾಡಬೇಕು. ಫಲಾನುಭವಿಗಳಿಗೆ ಆರ್.ಆರ್.ಸಂಖ್ಯೆ ಹಾಗೂ ಮೂಲಭೂತ ಸೌಕರ್ಯ ನೀಡಬೇಕು. ರೈತರಿಗೆ 12 ಗಂಟೆ 3 ಫೇಸ್ ವಿದ್ಯುತ್ ಪೂರೈಸಬೇಕು. ಸುಟ್ಟ ಟಿಸಿಗಳನ್ನು ತ್ವರಿತವಾಗಿ ಕೂಡಿಸುವ ವ್ಯವಸ್ಥೆಯಾಗಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಭಿಯಾನದಲ್ಲಿ ಭಾಗವಹಿಸಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು. ಈ ವೇಳೆ ಎಂ.ಎ.ಮಾಲಬಾವಡಿ, ಕೆ.ಎ.ಬನಹಟ್ಟಿ ಉಪಸ್ಥಿತರಿದ್ದರು.