ಸಾರಾಂಶ
ಒಕ್ಕಲಿಗರನ್ನು ಅವೈಜ್ಞಾನಿಕ ಜಾತಿ ಸಮೀಕ್ಷೆ ಮೂಲಕ ತುಳಿಯುವ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ವರದಿ ವಿರೋಧಿಸಿ ವಿವಿಧ ಸಮುದಾಯದವರು ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ರೆಡ್ಡಿ ಸಮುದಾಯದವರು ಒಗ್ಗಟಿನಿಂದ ಹೋರಾಟಕ್ಕೆ ಸಿದ್ಧರಾಗಬೇಕು.
ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಅವೈಜ್ಞಾನಿಕ ಜಾತಿ ಸಮೀಕ್ಷೆಯಿಂದ ಒಕ್ಕಲಿಗ ಸಮುದಾಯದ ಶಿಕ್ಷಣ, ಉದ್ಯೋಗ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿಸುವ ಹುನ್ನಾರ ರಾಜ್ಯ ಸರ್ಕಾರ ಮಾಡುತ್ತಿದೆ. ಅವೈಜ್ಞಾನಿಕ ಜಾತಿ ಸಮೀಕ್ಷೆ ತಕ್ಷಣ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ಒಕ್ಕಲಿಗರು ಉಗ್ರಹೋರಾಟಕ್ಕೆ ಮುಂದಾಗಬೇಕಾಗುತ್ತೆ ಎಂದು ರೆಡ್ಡಿ ಜನಸಂಘದ ರಾಜ್ಯ ಉಪಾಧ್ಯಕ್ಷ ವಿ.ವೆಂಕಟಶಿವಾರೆಡ್ಡಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಪಟ್ಟಣದಲ್ಲಿ ತಾಲೂಕು ಒಕ್ಕಲಿಗ ಸಮುದಾಯದ ಮುಖಂಡರು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಕಾಂತರಾಜು ಆಯೋಗದ ವರದಿ ಜಾರಿ ಮಾಡಲು ಹೊರಟಿದೆ. ಆದರೆ ಅದರ ವಿರುದ್ದ ಹೋರಾಟ ಮಾಡಲು ಒಕ್ಕಲಿಗ ಸಂಘದ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದರು.ಒಕ್ಕಲಿಗರ ತುಳಿಯುವ ಯತ್ನ
ಒಕ್ಕಲಿಗರನ್ನು ಅವೈಜ್ಞಾನಿಕ ಜಾತಿ ಸಮೀಕ್ಷೆ ಮೂಲಕ ತುಳಿಯುವ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ವರದಿ ವಿರೋಧಿಸಿ ವಿವಿಧ ಸಮುದಾಯದವರು ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ಸಮುದಾಯದವರು ಒಗ್ಗಟಿನಿಂದ ಹೋರಾಟಕ್ಕೆ ಕೈಜೋಡಿಸಬೇಕೆಂದರು. ಅವೈಜ್ಞಾನಿಕ ಸಮೀಕ್ಷೆಮುಖಂಡರಾದ ವಿ. ಮಂಜುನಾಥ್‍ರೆಡ್ಡಿ ಮಾತನಾಡಿ, ಎಲ್ಲೋ ಒಂದು ಕಡೆ ಕುಳಿತುಕೊಂಡು ಜಾತಿ ಗಣತಿ ವರದಿ ತಯಾರಿಸಲಾಗಿದೆ. ತಮಗೆ ಬೇಕಾದಂತೆ ವರದಿ ತಯಾರಿಸಲಾಗಿದೆ. ಅವೈಜ್ಞಾನಿಕ ಜಾತಿ ಸಮೀಕ್ಷೆ ವರದಿ ಹಿಂಪಡೆದು ವೈಜ್ಞಾನಿಕವಾಗಿ ಜಾತಿ ಸಮೀಕ್ಷೆ ನಡೆಸುವಂತೆ ಸರ್ಕಾರವನ್ನು ಒತಾಯಿಸಿದರು. ಈ ಸಂಧರ್ಭದಲ್ಲಿ ತಾಲೂಕು ಒಕ್ಕಲಿಗ ಮುಖಂಡರಾದ ವೈಶ್ರೀನಿವಾಸರೆಡ್ಡಿ, ನರಸಿಂಹರೆಡ್ಡಿ, ಪಿ.ಎಸ್.ಸುಬ್ಬಾರೆಡ್ಡಿ, ಜಯರಾಮರೆಡ್ಡಿ, ಪ್ರಭಾಕರರೆಡ್ಡಿ, ವೆಂಕಟರೆಡ್ಡಿ, ವೆಂಕಟರಂಗಾರೆಡ್ಡಿ, ಬೈರರೆಡ್ಡಿ, ವಿಷ್ಣುವರ್ಧನ್‍ರೆಡ್ಡಿ, ಶಿವರಾಮರೆಡ್ಡಿ, ರಘುರಾಮರೆಡ್ಡಿ, ರಮೇಶರೆಡ್ಡಿ ಮತ್ತಿತರರು ಇದ್ದರು.