ಸ್ಥಳೀಯರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

| Published : Oct 22 2023, 01:01 AM IST

ಸಾರಾಂಶ

ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿಗಳ ಪೈಪೋಟಿ ಆರಂಭವಾಗಿದ್ದು, ಶನಿವಾರ ಜೆಜೆ ಹಟ್ಟಿ ತಿಪ್ಪೇಸ್ವಾಮಿ ವಿನೂತನ ಪಾದಯಾತ್ರೆ ಹಮ್ಮಿಕೊಳ್ಳುವುದರ ಮೂಲಕ ಪಕ್ಷದ ವರಿಷ್ಠರ ಗಮನ ಸೆಳೆದಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಮಟಕಲ್ಲು ಆಂಜನೇಯ ಸ್ವಾಮಿ ದೇವಸ್ಥಾನವದವರೆಗೆ ಸುಮಾರು ಆರು ಕಿಮೀ ವರೆಗೆ ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸಿದ ತಿಪ್ಪೇಸ್ವಾಮಿ ನಂತರ ಆಂಜನೇಯ ಸ್ವಾಮೀಜಿಗೆ ಪೂಜೆ ಸಲ್ಲಿಸಿ, ಟಿಕೆಟ್ ಗಾಗಿ ಪ್ರಾರ್ಥಿಸಿದರು.
ಚಿತ್ರದುರ್ಗದಿಂದ ತಮಟಕಲ್ಲು ವರೆಗೆ ಪಾದಯಾತ್ರೆ ನಡೆಸಿದ ಜೆಜೆ ಹಟ್ಟಿ ತಿಪ್ಪೇಸ್ವಾಮಿ । ಆಂಜನೇಯ ಸ್ವಾಮೀಜಿಗೆ ಪೂಜೆ ಸಲ್ಲಿಸಿ, ಟಿಕೆಟ್ ಗಾಗಿ ಪ್ರಾರ್ಥನೆ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿಗಳ ಪೈಪೋಟಿ ಆರಂಭವಾಗಿದ್ದು, ಶನಿವಾರ ಜೆಜೆ ಹಟ್ಟಿ ತಿಪ್ಪೇಸ್ವಾಮಿ ವಿನೂತನ ಪಾದಯಾತ್ರೆ ಹಮ್ಮಿಕೊಳ್ಳುವುದರ ಮೂಲಕ ಪಕ್ಷದ ವರಿಷ್ಠರ ಗಮನ ಸೆಳೆದಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಮಟಕಲ್ಲು ಆಂಜನೇಯ ಸ್ವಾಮಿ ದೇವಸ್ಥಾನವದವರೆಗೆ ಸುಮಾರು ಆರು ಕಿಮೀ ವರೆಗೆ ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸಿದ ತಿಪ್ಪೇಸ್ವಾಮಿ ನಂತರ ಆಂಜನೇಯ ಸ್ವಾಮೀಜಿಗೆ ಪೂಜೆ ಸಲ್ಲಿಸಿ, ಟಿಕೆಟ್ ಗಾಗಿ ಪ್ರಾರ್ಥಿಸಿದರು. ಈ ವೇಳೆ ಬೆಂಬಲಿಗರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ತಮಗೆ ಸ್ಪರ್ಧಿಸುವ ಅವಕಾಶ ಕಲ್ಪಿಸಿತ್ತು. ಮೊದಲ ಪ್ರಯತ್ನದಲ್ಲಿ ಯಶ ಕಂಡಿರಲಿಲ್ಲ. ಆದರೆ ಕ್ಷೇತ್ರದ ಮತದಾರರು ಅಪಾರ ಪ್ರಮಾಣದಲ್ಲಿ ಮತ ಚಲಾಯಿಸಿ ಬೆಂಬಲ ಸೂಚಿಸಿದ್ದರು. ಇದೀಗ ಮತ್ತೊಮ್ಮೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಸ್ಥಳೀಯನಾದ ನನಗೆ ಪಕ್ಷ ಅವಕಾಶ ಕಲ್ಪಿಸಿಕೊಡಬೇಕೆಂದು ಹೇಳಿದರು. ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್ ಮಾತನಾಡಿ, ಚಿತ್ರದುರ್ಗ ಲೋಕಸಭೆ ಕ್ಷೇತ್ರದಾದ್ಯಂತ ಪ್ರವಾಸ ಕೈಗೊಂಡಿರುವ ಡಾ.ತಿಪ್ಪೇಸ್ವಾಮಿಗೆ ಎಲ್ಲ ಕಡೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ರಾಹುಲ್ ಗಾಂಧಿಯವರು ಯುವ ನಾಯಕರ ಮೇಲೆ ದೃಷ್ಟಿ ನೆಟ್ಟಿರುವುದರಿಂದ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದರು