ಅಲ್ಪಸಂಖ್ಯಾತ ಸಮುದಾಯದ ಹಿರಿಯ ನಾಯಕ ಜಮೀರ್ ಅಹಮದ್‌ರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಡಿಸಿಎಂ ಸ್ಥಾನ ನೀಡಬೇಕು, ಇಡೀ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಇವರ ಹಿಂದೆ ಇದೆ, ಕಾಂಗ್ರೆಸ್ ಪರವಾಗಿ ತೆಲಂಗಾಣ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಕೋಲಾರಮುಂಬರುವ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಜಮೀರ್ ಅಹಮದ್ ಖಾನ್ ಮತ್ತು ನಸೀರ್ ಅಹಮದ್ ಅವರಿಗೆ ಉನ್ನತ ಮಟ್ಟದ ರಾಜಕೀಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಮುಸ್ಲಿಂ ಸಮಾಜದ ಮುಖಂಡರು ನಗರದ ಬಂಬುಬಜಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನಿರ್ದೇಶಕ ಸಚೀನ್ ಜಾವೀದ್ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಹಿರಿಯ ನಾಯಕ ಜಮೀರ್ ಅಹಮದ್‌ರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಡಿಸಿಎಂ ಸ್ಥಾನ ನೀಡಬೇಕು, ಇಡೀ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಇವರ ಹಿಂದೆ ಇದೆ, ಕಾಂಗ್ರೆಸ್ ಪರವಾಗಿ ತೆಲಂಗಾಣ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ.೨೦೨೩ರ ಕರ್ನಾಟಕ ರಾಜ್ಯದ ಚುನಾವಣೆಯಲ್ಲಿ ಎಲ್ಲಾ ಮುಸ್ಲಿಮರು ಒಂದುಗೂಡಿಸಿ ಕಾಂಗ್ರೆಸ್ ಪರವಾಗಿ ಮತ ಸೆಳೆಯಲು ಯಶಸ್ವಿಯಾದರು, ಕಳೆದ ತಿಂಗಳು ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ನೇರ ಕಾರಣವಾಗಿದ್ದು ಅವರಿಗೆ ಉನ್ನತ ಮಟ್ಟದ ಸ್ಥಾನಕ್ಕೆ ಆಗ್ರಹಿಸಿದರು.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು ಪ್ರಾಮಾಣಿಕವಾಗಿ ಮತ ಚಲಾವಣೆ ಮಾಡಿದ್ದಾರೆ, ಅದರಲ್ಲೂ ಜಮೀರ್ ಖಾನ್ ಮತ್ತು ನಸೀರ್ ಅಹಮದ್ ಪ್ರಾಮಾಣಿಕತೆಗೆ ಕಾಂಗ್ರೆಸ್ ಪಕ್ಷವು ಸೂಕ್ತವಾದ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಮುಲ್ ನಿರ್ದೇಶಕ ಷಂಷೀರ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಫೈರೋಜ್ ಖಾನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೈಯದ್ ಆಫ್ರೀದ್, ಮುಖಂಡರಾದ ಸೈಫ್, ರಫೀ, ಪಾಷ, ಫಾರೂಕ್, ಸೈಯದ್, ಮೊಹಮ್ಮದ್ ನೂರ್, ಬಾಬರ್, ಸುಹೈಬ್, ಹಿದಾಯತ್, ಯಾಸೀನ್, ಸುಹೈಲ್ ಇದ್ದರು.