ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅರಸೀಕೆರೆ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಬಹಿರಂಗ ಸಭೆಗಳಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಾಸಕ ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹಲವು ಬಾರಿ ಭರವಸೆ ನೀಡಿದ್ದರು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅವರಿಗೆ ಸಚಿವ ಸ್ಥಾನ ದೊರೆಯದೆ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಮಾತ್ರ ನೀಡಲಾಯಿತು. ಇದರಿಂದ ಕ್ಷೇತ್ರದ ಜನರಲ್ಲಿ ನಿರಾಸೆ ಉಂಟಾಗಿತ್ತು ಎಂದು ಹೇಳಿದರು. ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದರಿಂದ ಪಕ್ಷ ಸಂಘಟನೆಗೆ ಮತ್ತಷ್ಟು ಶಕ್ತಿ ದೊರೆಯಲಿದೆ ಎಂದು ನಗರಸಭೆ ನಿಕಟಪೂರ್ವ ಅಧ್ಯಕ್ಷ ಎಂ. ಸಮೀವುಲ್ಲ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಪಕ್ಷದ ಶಿಸ್ತಿನ ಸಿಪಾಯಿಗಳು ಹಾಗೂ ಜನಪರ ನಿಲುವು ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದರಿಂದ ಪಕ್ಷ ಸಂಘಟನೆಗೆ ಮತ್ತಷ್ಟು ಶಕ್ತಿ ದೊರೆಯಲಿದೆ ಎಂದು ನಗರಸಭೆ ನಿಕಟಪೂರ್ವ ಅಧ್ಯಕ್ಷ ಎಂ. ಸಮೀವುಲ್ಲ ಅಭಿಪ್ರಾಯಪಟ್ಟರು.ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀರ್ ಅಹ್ಮದ್ ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದು, ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ವಿವಿಧ ವರ್ಗಗಳ ಜನರ ವಿಶ್ವಾಸವನ್ನು ಗಳಿಸಿದ್ದಾರೆ. ಅದೇ ರೀತಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಪಕ್ಷ ನೀಡಿದ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿದ್ದು, ಆಡಳಿತಾತ್ಮಕ ಅನುಭವ ಹಾಗೂ ಜನಸೇವೆಯಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ ಎಂದು ಹೇಳಿದರು.ಈ ಇಬ್ಬರು ನಾಯಕರಿಗೂ ಸಚಿವ ಸಂಪುಟದಲ್ಲಿ ಅವಕಾಶ ನೀಡಿದರೆ ಸರ್ಕಾರದ ಕಾರ್ಯವೈಖರಿಗೆ ಇನ್ನಷ್ಟು ಬಲ ಸಿಗಲಿದ್ದು, ಪಕ್ಷಕ್ಕೂ ಉತ್ತಮ ಹೆಸರು ತಂದುಕೊಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅರಸೀಕೆರೆ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಬಹಿರಂಗ ಸಭೆಗಳಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಾಸಕ ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹಲವು ಬಾರಿ ಭರವಸೆ ನೀಡಿದ್ದರು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅವರಿಗೆ ಸಚಿವ ಸ್ಥಾನ ದೊರೆಯದೆ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಮಾತ್ರ ನೀಡಲಾಯಿತು. ಇದರಿಂದ ಕ್ಷೇತ್ರದ ಜನರಲ್ಲಿ ನಿರಾಸೆ ಉಂಟಾಗಿತ್ತು ಎಂದು ಹೇಳಿದರು.ಇದೀಗ ಮುಂದಿನ ಸಚಿವ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ನಿರೀಕ್ಷೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಇದೆ. ಆದರೆ ಇದುವರೆಗೆ ಯಾವುದೇ ಘೋಷಣೆ ಹೊರಬಂದಿಲ್ಲದಿರುವುದು ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.ಜಮೀರ್ ಅಹ್ಮದ್ ಅವರ ವಿರುದ್ಧ ಈ ಹಿಂದೆ ಪ್ರಸ್ತಾಪವಾಗಿದ್ದ ಸಿ.ಡಿ ಪ್ರಕರಣವು ರಾಜಕೀಯ ಪ್ರೇರಿತ ಹಾಗೂ ಬೋಗಸ್ ಆರೋಪವಾಗಿತ್ತು ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ಆದರೂ ಆ ವಿಚಾರವನ್ನು ಮುಂದಿಟ್ಟುಕೊಂಡು ಅವರಿಗೆ ಸಚಿವ ಸ್ಥಾನ ನೀಡಬಾರದು ಎನ್ನುವುದು ಸರಿಯಲ್ಲ ಎಂದು ಸಮೀವುಲ್ಲ ಅಭಿಪ್ರಾಯಪಟ್ಟರು.ದಿ. ಶಾಮನೂರು ಶಿವಶಂಕರಪ್ಪ ಅವರು ಸಹ ಈ ಹಿಂದೆ ನಡೆದ ಬಹಿರಂಗ ಸಭೆಯೊಂದರಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರರಿಗೆ ಮತ ನೀಡುವಂತೆ ಕರೆ ನೀಡಿದ್ದರು. ಆದರೆ ಆ ವಿಚಾರವನ್ನು ಪ್ರಶ್ನಿಸದವರು, ಜಮೀರ್ ಅಹ್ಮದ್ ಅವರ ವಿಷಯದಲ್ಲಿ ಮಾತ್ರ ವಿಭಿನ್ನ ಮಾನದಂಡ ಅನುಸರಿಸುತ್ತಿರುವುದು ಏಕೆ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಹೇಳಿದರು.ಜಾತ್ಯತೀತ ತತ್ವಗಳಿಗೆ ಬದ್ಧರಾಗಿ ಎಲ್ಲ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಜಮೀರ್ ಅಹ್ಮದ್ ಅವರನ್ನು ಕಡೆಗಣಿಸುವುದು ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗಲಿದೆ. ಅಲ್ಪಸಂಖ್ಯಾತರು ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಹಾಗೂ ಸೇವೆ ಶ್ಲಾಘನೀಯವಾಗಿದ್ದು, ಅಂತಹ ನಾಯಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಪುರಸಭೆ ಮಾಜಿ ಉಪಾಧ್ಯಕ್ಷ ಜಮೀಲ್, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಸಿಖಂದರ್, ಸಮಾಜದ ಮುಖಂಡರಾದ ಟಿಪ್ಪು, ಯುನಸ್, ಅಫ್ರೋಜ್ ಹಾಗೂ ಇತರರು ಉಪಸ್ಥಿತರಿದ್ದರು.