ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮ ಗಾಣಿಗ ಸಮಾಜದ ಶಾಸಕರು ಇಲ್ಲಿಯವರೆಗೂ ಸಚಿವ ಸ್ಥಾನ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಲಕ್ಷ್ಮಣ ಸವದಿ ಅವರು ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು. ಆದರೆ, ಕಾಂಗ್ರೆಸ್ ಪಕ್ಷ ಗಾಣಿಗ ಸಮಾಜಕ್ಕೆ ಸತತವಾಗಿ ಅನ್ಯಾಯ ಮಾಡುತ್ತಾ ಬಂದಿದೆ.
ಕನ್ನಡಪ್ರಭ ವಾರ್ತೆ ನಾಗಮಂಗಲ
ಗಾಣಿಗ ಸಮಾಜದ ಶಾಸಕರಿಗೆ ರಾಜ್ಯ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಅಯ್ಯಪ್ಪ ಒತ್ತಾಯಿಸಿದರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗಾಣಿಗ ಸಮಾಜದ ಮೂವರು ಶಾಸಕರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರೂ ಕೂಡ ಸಮುದಾಯದ ಯಾವೊಬ್ಬ ಶಾಸಕರಿಗೂ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮ ಗಾಣಿಗ ಸಮಾಜದ ಶಾಸಕರು ಇಲ್ಲಿಯವರೆಗೂ ಸಚಿವ ಸ್ಥಾನ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಲಕ್ಷ್ಮಣ ಸವದಿ ಅವರು ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು. ಆದರೆ, ಕಾಂಗ್ರೆಸ್ ಪಕ್ಷ ಗಾಣಿಗ ಸಮಾಜಕ್ಕೆ ಸತತವಾಗಿ ಅನ್ಯಾಯ ಮಾಡುತ್ತಾ ಬಂದಿದೆ ಎಂದರು.ಶಾಸಕರಾದ ಬಿ.ಕೆ.ಸಂಗಮೇಶ್ ಮತ್ತು ವೀರೇಂದ್ರ ಪಪ್ಪಿ ಅವರಿಗೆ ಮುಂದಿನ ಕ್ಯಾಬಿನೆಟ್ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ನಾವು ಅನಿವಾರ್ಯವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಆಗ್ರಹಿಸಿದರು. ಜೂ.೨೦ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿರೋಧ ಸಮಾವೇಶಕನ್ನಡಪ್ರಭ ವಾರ್ತೆ ಮಂಡ್ಯ
ವಿವಿಧ ರಾಜ್ಯಗಳಲ್ಲಿ ನಡೆಸಿದ ಸ್ವರೂಪದಲ್ಲೇ ಎಸ್‌ಐಆರ್‌ನ್ನು ಕರ್ನಾಟಕದಲ್ಲಿ ನಡೆಸುವುದನ್ನು ವಿರೋಧಿಸಿ ಜೂ.೧೩ ರಿಂದ ಜನಜಾಗೃತಿ ಜಾಥಾ ಏರ್ಪಡಿಸಲಾಗಿದೆ ಎಂದು ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟದ ಬಿ.ಟಿ.ವಿಶ್ವನಾಥ್ ಹೇಳಿದರು.ಮತಪಟ್ಟಿ ಪರಿಷ್ಕರಣೆ ವೇಳೆ ಸಾಫ್ಟ್‌ವೇರ್ ಬಳಸಬಾರದು. ಕರಡುಪಟ್ಟಿ ತಯಾರಾದ ನಂತರ ಗ್ರಾಮಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಬೇಕು. ಮತದಾರರ ಪಟ್ಟಿಯನ್ನು ಮೆಷಿನ್ ರೀಡಬಲ್ ಫಾರ್ಮ್ಯಾಟ್ ಮೂಲಕ ಪಾರದರ್ಶಕತೆ ಪಾಲಿಸಬೇಕು. ಮನವಿ, ಆಕ್ಷೇಪಣೆ ಸಲ್ಲಿಸಲು ಅಗತ್ಯ ದಾಖಲೆ ಒದಗಿಸಲು ಕನಿಷ್ಠ ೬ ತಿಂಗಳ ಸಮಯಾವಕಾಶ ಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ೮೦ ಮತ ಕ್ಷೇತ್ರಗಳಲ್ಲಿ ಎಸ್‌ಐಆರ್ ವಿರುದ್ಧ ಜಾಥಾ ನಡೆಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.ನಾಗರಿಕರ ಆಕ್ಷೇಪಣೆಗಳು ಮತ್ತು ಪ್ರಶ್ನೆಗಳ ನಡುವೆಯೂ ರಾಜ್ಯ ಚುನಾವಣಾ ಆಯೋಗದಿಂದ ಇದುವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ, ಸ್ಪಂದನೆ ದೊರಕಿಲ್ಲ. ಇದನ್ನು ಖಂಡಿಸುವುದಾಗಿ ಹೇಳಿದ ಅವರು, ಜೂ.೧೩ರಿಂದ ಜೂ.೧೮ರವರೆಗೆ ಐದು ಮಾರ್ಗಗಳಲ್ಲಿ ಇದು ಕರ್ನಾಟಕ- ನಡೆಯೋದಿಲ್ಲ ಯಾವುದೇ ದುಷ್ಟ ಆಟ ಎಂಬ ಘೋಷವಾಕ್ಯದೊಂದಿಗೆ ರಾಜ್ಯವ್ಯಾಪಿ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.ಬೀದರ್‌ನಿಂದ ಆರಂಭವಾಗಿ ಮಂಡ್ಯವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಜಾಥಾ ಸಂಚರಿಸಲಿದೆ. ಜೂ.೨೦ರಂದು ಜಾಥಾ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಳ್ಳಲಿದೆ ಎಂದು ನುಡಿದರು.
ಗೋಷ್ಠಿಯಲ್ಲಿ ಎಂ.ಸಿದ್ದರಾಜು, ಪ್ರೊ.ಜಿ.ಟಿ.ವೀರಪ್ಪ, ಮುಕ್ತಾರ್ ಅಹಮದ್, ಬಿ.ಎಸ್.ಶಿಲ್ಪ, ಮುತ್ತಯ್ಯ ಇತರರಿದ್ದರು.