ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಆ.16 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಸಂಚಾಲಕ ಕೆ. ಪ್ರಸನ್ನ ಚಕ್ರವರ್ತಿ ಆಗ್ರಹಿಸಿದರು.ಒಳಮೀಸಲಾತಿ ಕಲ್ಪಿಸಲು ಪರಿಶಿಷ್ಟ ಜಾತಿ ಒಳ ಸಮುದಾಯಗಳ ನಿಖರ ದತ್ತಾಂಶ ಲಭ್ಯವಿಲ್ಲಕ್ಕಾಗಿ, ಸರ್ಕಾರ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಸಮಸ್ಯೆಯನ್ನು ಬಗೆಹರಿಸಲು ನಿವೃತ್ತ ನ್ಯಾ.ಎಚ್.ಎನ್. ನಾಗಮೋಹನ ದಾಸ್ ಸಮಿತಿ ರಚಿಸಿದ್ದು, ಉಪಜಾತಿಗಳನ್ನು ನಮೂದೆಗಾಗಿ ಎರಡು ತಿಂಗಳ ಕಾಲಾವಕಾಶ ತೆಗೆದುಕೊಂಡಿದ್ದು ಸಮೀಕ್ಷೆ ಮುಗಿದರು, ಈವರೆಗೂ ಅದರನ್ನು ಜಾರಿ ಮಾಡುವ ಕೆಲಸ ಮಾಡಿಲ್ಲ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಸುಪ್ರೀಂಕೋರ್ಟ್ ಆದೇಶದನ್ವಯ ಎಂಪಿರಿಕಲ್ ಡಾಟಾವನ್ನು ಅತ್ಯಂತ ಪಾರದರ್ಶಕವಾಗಿ ಸಮೀಕ್ಷೆ ನಡೆಸಿ ಆ.4 ರಂದು ಸರ್ಕಾರಕ್ಕೆ ವರದಿ ನೀಡಿದೆ. ಆ.7 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಆ.16 ರಂದು ನಡೆಯಲಿರುವ, ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡುವುದಾಗಿ ಭರವಸೆ ನೀಡಿದ್ದು, ಮಾತಿನಂತೆ ನಡೆದುಕೊಳ್ಳಬೇಕು ಎಂದರು.ಕೇವಲ 3 ತಿಂಗಳ ಅವಧಿಯಲ್ಲೇ ಸಮೀಕ್ಷೆ ನಡೆಸಿ ದತ್ತಾಂಶ ಪಡೆದು ತೆಲಂಗಾಣ, ಹರಿಯಾಣ, ಆಂಧ್ರ ಸರ್ಕಾರಗಳು ಒಳಮೀಸಲಾತಿ ಜಾರಿಗೊಳಿಸುವುದರ ಮೂಲಕ ತಮ್ಮ ಬದ್ಧತೆ ಪ್ರದರ್ಶಿಸಿದ್ದಾರೆ. ಅವರಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡು, ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.ಒಕ್ಕೂಟದ ಸಂಚಾಲಕ ಮುರಡೀಪುರ ರವಿಕುಮಾರ್, ನಾರಾಯಣ, ಪುಟ್ಟಣ್ಣ, ಮಂಜುನಾಥ್, ಶಂಕರ್ ಇದ್ದರು.