ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಕೈ ಬಿಡಲಾಗಿದೆ. ಈ ಬಗ್ಗೆ ಸದನದಲ್ಲಿ ಮಾತನಾಡಲಾಗುವುದು, ಈ ಬಗ್ಗೆ ಇಂದೇ ಸರ್ಕಾರಕ್ಕೆ ಪತ್ರ ಬರೆದು ಶಿಕ್ಷಣವನ್ನು ಸಂವಿಧಾನ ಪೀಠಿಕೆಯಲ್ಲಿ ಸೇರಿಸಲು ಒತ್ತಾಯಿಸಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು.
ಕನ್ನಡಪ್ರಭ ವಾರ್ತೆ ಚಿಕ್ಕನಾಯಕನಹಳ್ಳಿ
ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಕೈ ಬಿಡಲಾಗಿದೆ. ಈ ಬಗ್ಗೆ ಸದನದಲ್ಲಿ ಮಾತನಾಡಲಾಗುವುದು, ಈ ಬಗ್ಗೆ ಇಂದೇ ಸರ್ಕಾರಕ್ಕೆ ಪತ್ರ ಬರೆದು ಶಿಕ್ಷಣವನ್ನು ಸಂವಿಧಾನ ಪೀಠಿಕೆಯಲ್ಲಿ ಸೇರಿಸಲು ಒತ್ತಾಯಿಸಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು. ಚಿಕ್ಕನಾಯಕನಹಳ್ಳಿ ಪಟ್ಟಣದ ಕನ್ನಡ ಸಂಘದ ವೇದಿಕೆ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚಾರಣೆ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂರವರ 119ನೇ ಜನ್ಮ ದಿನಾಚಾರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದರು, ಅದೇ ರೀತಿ ನಾವೂ ಸಹ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಕೊಡುತ್ತಿದ್ದೇವೆ. ಎಲ್ಲಾ ಸಮುದಾಯದವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ ಮೂಲಕ ಅಂಬೇಡ್ಕರ್ ರವರ ಪರಿಕಲ್ಪನೆಯತ್ತ ಹೆಜ್ಜೆ ಹಾಕೋಣ ಎಂದು ತಿಳಿಸಿದರು.ತಹಸೀಲ್ದಾರ್ ಮಮತ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಇಬ್ಬರೂ ಮಹನೀಯರು ನಮಗೆ ಹಾಕಿಕೊಟ್ಟಂತಹ ಆಶಯಗಳು ನಮಗೆ ಪ್ರೇರಣೆದಾಯಕ, ಅಂಬೇಡ್ಕರ್ ರವರು ಹೇಳುತ್ತಿದ್ದರು ನನ್ನನ್ನು ಅಪ್ಪಿಕೊಂಡದ್ದು ಪುಸ್ತಕ ಮಾತ್ರ, ಅವರ ಮಾತುಗಳು ಸತ್ಯ ಎಂದ ಅವರು, ಮಹನೀಯರ ಅಧ್ಯಯನಗಳು ನಡೆಸಬೇಕು, ಅಧ್ಯಯನದ ಜೊತೆಗೆ ಮಹನೀಯರ ಜಯಂತಿಗಳಿಗಾಗಿ ನಡೆಯುವ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಉಪನ್ಯಾಸಗಳನ್ನು ತಿಳಿದುಕೊಂಡು ಅರಿಯಬೇಕು ಎಂದರು.
ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್, ಡಾ.ರವಿಕುಮಾರ್, ಡಾ.ಸಿ.ಜಿ.ಲಕ್ಷ್ಮೀಪತಿ ಮಾತನಾಡಿದರು.ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬೇವಿನಹಳ್ಳಿ ಚನ್ನಬಸಪ್ಪ, ರಘುನಾಥ್ ಭದ್ರನಾಯಕನ ತಾಂಡ್ಯ, ರುದ್ರೇಶ್ ದಬ್ಬಗುಂಟೆ, ಚನ್ನಿಗರಾಯಪ್ಪ ಅಣೇಕಟ್ಟೆ, ವೆಂಕಟೇಶಯ್ಯ ದಬ್ಬೆಘಟ್ಟ, ಹನುಮಂತಪ್ಪ ಮೈಲ್ ಕಬ್ಬೆ, ಕನ್ನಡ ಸಂಘದ ಅಧ್ಯಕ್ಷ ಸಿ.ಬಿ.ರೇಣುಕಸ್ವಾಮಿ, ಕಲ್ಲೇನಹಳ್ಳಿ ಸಣ್ಣಮ್ಮ, ಶಂಕರ್ ಬರಕನಹಾಳ್, ಮಂಜುಭಾರ್ಗವಿ, ದಿಲೀಪ್ ಅರಳೀಕೆರೆ ಹಾಗೂ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಮಾಜ ಕಲ್ಯಾಣಾಧಿಕಾರಿ ಶ್ರೀಧರಮೂರ್ತಿ, ಕಚೇರಿ ವ್ಯವಸ್ಥಾಪಕ ಕುಮಾರಸ್ವಾಮಿ ಆರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.