ಸೌಜನ್ಯ ಸಾವಿನ ತನಿಖೆ ನಡೆಸಿ ನ್ಯಾಯ ದೊರಕಿಸಲು ಆಗ್ರಹ

| Published : Mar 11 2025, 12:45 AM IST

ಸೌಜನ್ಯ ಸಾವಿನ ತನಿಖೆ ನಡೆಸಿ ನ್ಯಾಯ ದೊರಕಿಸಲು ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರ ಮತ್ತು ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸತ್ತುಹೋಗಿದೆ. ಗೃಹಮಂತ್ರಿ, ಪೊಲೀಸ್ ಇಲಾಖೆಗೆ ಗೊತ್ತಿದ್ದರೂ ಅವರ ಮೇಲಿನ ಅಭಿಮಾನಕ್ಕೋಸ್ಕರ ಕ್ರಮ ಕೈಗೊಳ್ಳುತ್ತಿಲ್ಲ. ಜೊತೆಗೆ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಹದಿಮೂರು ವರ್ಷಗಳ ಹಿಂದೆ ನಡೆದ ಸೌಜನ್ಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ಕುಟುಂಬದವರಿಗೆ ನ್ಯಾಯ ದೊರಕಿಸಿಕೊಡುವಂತೆ ರಾಜ್ಯ ರೈತಪರ ಹೋರಾಟಗಾರರ ಸಂಘದ ಉಪಾಧ್ಯಕ್ಷ ಎಂ.ಕೆ.ಸಂಜಯ್‌ಕುಮಾರ್ ಹೇಳಿದರು.

ಧರ್ಮಸ್ಥಳ ಗ್ರಾಮದಲ್ಲಿ ನಡದಿರುವ ಸೌಜನ್ಯ ಸಾವಿನ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರೇ ಮುಂದೆ ಬಂದು ಸೌಜನ್ಯ ಕೊಲೆ ಪ್ರಕರಣದ ವಿವರಣೆಯನ್ನು ನೀಡಬೇಕು. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ನಿಮ್ಮ ಮುಖಾಂತರ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಸರ್ಕಾರ ಮತ್ತು ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸತ್ತುಹೋಗಿದೆ. ಗೃಹಮಂತ್ರಿ, ಪೊಲೀಸ್ ಇಲಾಖೆಗೆ ಗೊತ್ತಿದ್ದರೂ ಅವರ ಮೇಲಿನ ಅಭಿಮಾನಕ್ಕೋಸ್ಕರ ಕ್ರಮ ಕೈಗೊಳ್ಳುತ್ತಿಲ್ಲ. ಜೊತೆಗೆ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ. ಕೊಲೆ, ಸುಲಿಗೆ ನಡೆಯುತ್ತಿದ್ದರೂ ಮೂಕಪ್ರೇಕ್ಷಕರಂತಿರುವ ಮುಖ್ಯಮಂತ್ರಿಗಳ ಸೌಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ದೊರಕಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

ನರೇಗಾ ಕ್ರಿಯಾ ಯೋಜನೆ ತಯಾರಿಸಲು ಗ್ರಾಪಂ ವ್ಯಾಪ್ತಿ ಅಭಿಯಾನ

ಮಂಡ್ಯ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಲೂಕಿನ 46 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸುವ ಉದ್ದೇಶದಿಂದ ಅಭಿಯಾನ ನಡೆಸಲಾಗುತ್ತಿದೆ.

ರೈತರು ಗ್ರಾಮ ಪಂಚಾಯ್ತಿಗಳಿಂದ ಹಾಗೂ ಅನುಷ್ಟಾನ ಇಲಾಖೆಗಳಾದ ಕೃಷಿ, ತೋಟಗಾರಿಕೆ, ರೇಷ್ಮೇ ಹಾಗೂ ಸಾಮಾಜಿಕ ಅರಣ್ಯ ಇಲಾಖೆಗಳ ಅಡಿ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.

ನರೇಗಾ ಯೋಜನೆಯಡಿ ಪುರುಷರು ಮತ್ತು ಮಹಿಳೆಯರಿಗೆ 349 ರು. ಸಮಾನ ಕೂಲಿಯಿದ್ದು, ಒಂದು ಗ್ರಾಮೀಣ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಉದ್ಯೋಗ ಅವಕಾಶವಿದೆ. ಒಂದು ಕುಟುಂಬಕ್ಕೆ ಜೀವಿತಾವಧಿಗೆ 5 ಲಕ್ಷ ರು.ವರೆಗೆ ವೈಯಕ್ತಿಕ ಕಾಮಗಾರಿ ನೆರವು ಪಡೆಯಬಹುದು.

ನರೇಗಾ ಯೋಜನೆಯಡಿ ಗ್ರಾಮೀಣ ರೈತರು ಹಾಗೂ ಕೂಲಿಕಾರರು ವೈಯಕ್ತಿಕ ಕಾಮಗಾರಿಗಳಾದ ತೆಂಗು, ಬಾಳೆ, ಗುಲಾಬಿ, ನುಗ್ಗೆ, ಡ್ರಾಗನ್ ಫ್ರೂಟ್, ರೇಷ್ಮೇ ಬೆಳೆ, ಬದು ನಿರ್ಮಾಣ, ಎರೆಯುಳು ತೊಟ್ಟಿ, ದನದ ಕೊಟ್ಟಿಗೆ, ಕೋಳಿಶೆಡ್, ಕುರಿ ಶೆಡ್ ಇತ್ಯಾದಿ ವೈಯಕ್ತಿಕ ಕಾಮಗಾರಿಗಳ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಎಲ್ಲ ಅರ್ಹ ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನ ದೊರಕಿಸಿಕೊಡುವ ಉದ್ದೇಶದಿಂದ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಐಇಸಿ ಚಟುವಟಿಕೆಗಳ ಮೂಲಕ ಮನೆ ಮನೆಗೆ ಭೇಟಿ ನೀಡಿ, ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆಸ್ತಕ ರೈತರು ತಮ್ಮ ಬೇಡಿಕೆ ಸಲ್ಲಿಸಿ ಕಾಮಗಾರಿ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಪಂ ಭೇಟಿ ನೀಡಬಹುದು ಎಂದು ಯೋಜನೆ ತಾಲೂಕು ಐ ಇ ಸಿ ಸಂಯೋಜಕರು ತಿಳಿಸಿದ್ದಾರೆ.