ಸಾರಾಂಶ
ಚಿಕ್ಕಮಗಳೂರು, ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಜಿಲ್ಲಾಡಳಿತ ಮುಖಾಂತರ ಸಮಾಜ ಕಲ್ಯಾಣ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಜಿಲ್ಲಾಡಳಿತ ಮುಖಾಂತರ ಸಮಾಜ ಕಲ್ಯಾಣ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.
ಈ ಸಂಬಂಧ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಜಿಲ್ಲೆ ಅತಿ ಹೆಚ್ಚು ಮಲೆನಾಡು ಪ್ರದೇಶ ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ದಲಿತರು, ಕಾರ್ಮಿಕರು ವಾಸಿಸುತ್ತಿರುವ ಜೊತೆಗೆ ಅತಿಹೆಚ್ಚು ದೌರ್ಜನ್ಯ ಪ್ರಕರಣಗಳು ದಲಿತರ ಮೇಲೆ ಹೆಚ್ಚಾಗುತ್ತಿವೆ ಎಂದು ಹೇಳಿದರು.ಸುಮಾರು ವರ್ಷಗಳಿಂದ ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಇತ್ಯರ್ಥಗೊಂಡಿಲ್ಲ. ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆ ತೆರೆಯಬೇಕು. ದಲಿತರ ಮೇಲಿನ ದೌರ್ಜನ್ಯ ನಿಯಂತ್ರಣ, ತ್ವರಿತ ತನಿಖೆ ಹಾಗೂ ನ್ಯಾಯಕ್ಕಾಗಿ ವಿಶೇಷ ಠಾಣೆ ಬಹಳ ಅವಶ್ಯಕತೆಯಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಯು.ಸಿ.ರಮೇಶ್, ದಸಂಸ ಸಂಘಟನಾ ಸಂಚಾಲಕ ಮಂಜಯ್ಯ, ತರೀಕೆರೆ ತಾಲ್ಲೂಕು ಸಂಚಾಲಕ ರಾಮಚಂದ್ರ, ಮುಖಂಡರಾದ ಕರಿಯಪ್ಪ, ರುದ್ರಯ್ಯ, ಚಂದ್ರಪ್ಪ, ಸೋಮಶೇಖರ್ ಹಾಜರಿದ್ದರು. 24 ಕೆಸಿಕೆಎಂ 3ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯಬೇಕೆಂದು ಆಗ್ರಹಿಸಿ ದಸಂಸ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.