ಶುಕ್ರವಾರ ಮಧ್ಯಾಹ್ನ ತಾಲೂಕಾಡಳಿತ ಸೌಧದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಾಲೂಕಾಡಳಿತದೊಂದಿಗೆ ಸಭೆ ನಡೆಸಿ ಬೆಳಗಾವಿಯ ಘೋಷಿಸಿದ ದರದಿಂದ ತಾಲೂಕಿನ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯವನ್ನು ಅಂಕಿ ಅಂಶಗಳೊಂದಿಗೆ ವಿವರಿಸಿ ಬಿಜೆಪಿ ಮುಖಂಡರು ಮನವಿಯನ್ನು ಸಲ್ಲಿಸಿದರು.
ಹಳಿಯಾಳ: ಕಬ್ಬಿನ ಬೆಲೆ ನಿಗದಿಯಲ್ಲಿ ಹಳಿಯಾಳದ ರೈತರಿಗೆ ಅನ್ಯಾಯವಾಗಿದ್ದು, ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಮುಂದಾಳತ್ವದಲ್ಲಿ ಹಳಿಯಾಳ ಬಿಜೆಪಿ ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು.
ಶುಕ್ರವಾರ ಮಧ್ಯಾಹ್ನ ತಾಲೂಕಾಡಳಿತ ಸೌಧದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಾಲೂಕಾಡಳಿತದೊಂದಿಗೆ ಸಭೆ ನಡೆಸಿ ಬೆಳಗಾವಿಯ ಘೋಷಿಸಿದ ದರದಿಂದ ತಾಲೂಕಿನ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯವನ್ನು ಅಂಕಿ ಅಂಶಗಳೊಂದಿಗೆ ವಿವರಿಸಿ ಮನವಿಯನ್ನು ಸಲ್ಲಿಸಿದರು.ಪ್ರತಿಭಟನೆಯ ಎಚ್ಚರಿಕೆ: ಹಳಿಯಾಳದ ರೈತರಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಕಬ್ಬಿನ ದರ ನಿಗದಿಪಡಿಸದಿದ್ದಲ್ಲಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ, ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುನೀಲ್ ವಿ. ಹೆಗಡೆ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೆಕರ್ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಹಳಿಯಾಳ ಮಂಡಲದ ಸಂಯೋಜನೆಯಲ್ಲಿ ಸಕ್ಕರೆ ಕಾರ್ಖಾನೆ ಎದುರು ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ಬಿಜೆಪಿ ಮಂಡಲ ಅಧ್ಯಕ್ಷ ವಿಠ್ಠಲ ಸಿದ್ದಣ್ಣನವರ, ಪ್ರಧಾನ ಕಾರ್ಯದರ್ಶಿ ಸಂತೋಷ ಘಟಕಾಂಬ್ಳೆ, ರೈತ ಮೊರ್ಚಾ ಅಧ್ಯಕ್ಷ ಸೋನಪ್ಪ ಸುಣಕಾರ, ಜ್ಞಾನೇಶ ಮಾನಗೆ, ಗಣಪತಿ ಕರಂಜೇಕರ, ಯಲ್ಲಪ್ಪ ಹೆಳವರ, ಶಂಕರ ಗಳಗಿ ಹಾಗೂ ಇತರರು ಇದ್ದರು.