ಬೇಲೂರು ತಾಲೂಕು ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾನಗರದ ೧೦ರಿಂದ ೧೫ ಮನೆಗಳಿಗೆ ಮೂಲಭೂತ ಸೌಕರ್ಯಗಳ ಒದಗಿಸಲು ಸ್ಥಳೀಯ ಆಡಳಿತ ಮಂಡಳಿ ವಿಫಲವಾಗಿದ್ದು ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ, ಬೀದಿದೀಪ ಹಾಗೂ ನೀರಿನ ವ್ಯವಸ್ಥೆ ಇಲ್ಲದೆ ದಿನನಿತ್ಯದ ಬದುಕು ನಡೆಸುವುದು ಕಷ್ಟಕರವಾಗಿದೆ. ಈ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿಗೆ ಐದಾರು ಬಾರಿ ಅರ್ಜಿಗಳ ಮೂಲಕ ಮನವಿ ಸಲ್ಲಿಸಿದ್ದರೂ, ಇದುವರೆಗೆ ಯಾವುದೇ ರೀತಿಯ ಪರಿಹಾರ ದೊರೆತಿಲ್ಲ ಎಂಬುದು ನಿವಾಸಿಗಳ ಆರೋಪವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಸಮಸ್ಯೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಬೇಸರಗೊಂಡ ಗ್ರಾಮಸ್ಥರು ಕೆಆರ್‌ಎಸ್ ಪಕ್ಷದ ಮುಖಂಡರನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಪರಿಹರಿಸಿಕೊಡುವಂತೆ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಇಂದಿರಾ ನಗರದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲದೆ ನಿವಾಸಿಗಳು ಪರದಾಡುತ್ತಿದ್ದು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕೆಆರ್‌ಎಸ್ ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.ಸಮರ್ಪಕ ರಸ್ತೆ, ಬೀದಿದೀಪ ಹಾಗೂ ನೀರಿನ ವ್ಯವಸ್ಥೆಯಿಲ್ಲದೆ ಬದುಕು ಸಾಗಿಸಬೇಕಾದ ದುಸ್ಥಿತಿಯಿದ್ದು ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಬೇಸತ್ತ ಇಂದಿರಾನಗರದ ನಿವಾಸಿಗಳು ಇದೀಗ ತಮ್ಮ ಅಳಲನ್ನು ಕೆಆರ್‌ಎಸ್ ಪಕ್ಷದ ಮುಖಂಡರ ಮುಂದೆ ತೋಡಿಕೊಂಡಿದ್ದಾರೆ. ಬೇಲೂರು ತಾಲೂಕು ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾನಗರದ ೧೦ರಿಂದ ೧೫ ಮನೆಗಳಿಗೆ ಮೂಲಭೂತ ಸೌಕರ್ಯಗಳ ಒದಗಿಸಲು ಸ್ಥಳೀಯ ಆಡಳಿತ ಮಂಡಳಿ ವಿಫಲವಾಗಿದ್ದು ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ, ಬೀದಿದೀಪ ಹಾಗೂ ನೀರಿನ ವ್ಯವಸ್ಥೆ ಇಲ್ಲದೆ ದಿನನಿತ್ಯದ ಬದುಕು ನಡೆಸುವುದು ಕಷ್ಟಕರವಾಗಿದೆ. ಈ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿಗೆ ಐದಾರು ಬಾರಿ ಅರ್ಜಿಗಳ ಮೂಲಕ ಮನವಿ ಸಲ್ಲಿಸಿದ್ದರೂ, ಇದುವರೆಗೆ ಯಾವುದೇ ರೀತಿಯ ಪರಿಹಾರ ದೊರೆತಿಲ್ಲ ಎಂಬುದು ನಿವಾಸಿಗಳ ಆರೋಪವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಸಮಸ್ಯೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಬೇಸರಗೊಂಡ ಗ್ರಾಮಸ್ಥರು ಕೆಆರ್‌ಎಸ್ ಪಕ್ಷದ ಮುಖಂಡರನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಪರಿಹರಿಸಿಕೊಡುವಂತೆ ಮನವಿ ಮಾಡಿದ್ದಾರೆ.ಈ ಕುರಿತು ಕೆಆರ್‌ಎಸ್ ಪಕ್ಷದ ಅಧ್ಯಕ್ಷ ಕುಮಾರ್‌ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ರಸ್ತೆ, ಬೀದಿ ದೀಪ ಹಾಗೂ ನೀರಿನಂತಹ ಮೂಲಭೂತ ಸೌಕರ್ಯಗಳು ದೊರೆಯುವುದು ಅಗತ್ಯವಾಗಿದೆ. ಗ್ರಾಮಸ್ಥರು ಹಲವು ಬಾರಿ ಅರ್ಜಿ ಸಲ್ಲಿಸಿದ್ದರೂ ಸಮಸ್ಯೆ ಬಗೆಹರಿದಿಲ್ಲ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು, ದಂಡಾಧಿಕಾರಿಗಳು ಹಾಗೂ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಇಂದಿರಾನಗರದ ನಿವಾಸಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರುಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಸದಸ್ಯರಾದ ಆಟೋ ಸುನಿಲ್, ರಫೀಕ್, ಆಟೋ ಧರ್ಮ, ಮಂಜು ನಿವಾಸಿಗಳಾದ ನಿರ್ವಾಣಯ್ಯ ಶಾಹೀನ, ಅನ್ವರ್‌, ರಾಜು ಪೂಜಾರ್‌, ಮಂಜುಳಾ ಇದ್ದರು.