ನಿವೃತ್ತ ನೌಕರರಿಗೆ ೭ನೇ ವೇತನ ಆಯೋಗದ ಸೌಲಭ್ಯ ಒದಗಿಸಲು ಆಗ್ರಹ

| Published : Aug 24 2024, 01:20 AM IST

ನಿವೃತ್ತ ನೌಕರರಿಗೆ ೭ನೇ ವೇತನ ಆಯೋಗದ ಸೌಲಭ್ಯ ಒದಗಿಸಲು ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ನಿವೃತ್ತ ನೌಕರಿಗೆ ೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ಡಿಸಿಆರ್‌ಜಿ ಹಾಗೂ ಕಮ್ಯುಟೇಶನ್ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯ ಒದಗಿಸುವಲ್ಲಿ ಅರ್ಥಿಕವಾಗಿ ವಂಚಿತವಾಗದಂತೆ ಸರಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಸಂಘದ ತಾಲೂಕು ಅಧ್ಯಕ್ಷ ಎಚ್.ಎನ್. ಪಾಟೀಲ ಮನವಿ ಮಾಡಿದರು.

ಹಾನಗಲ್ಲ: ನಿವೃತ್ತ ನೌಕರಿಗೆ ೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ಡಿಸಿಆರ್‌ಜಿ ಹಾಗೂ ಕಮ್ಯುಟೇಶನ್ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯ ಒದಗಿಸುವಲ್ಲಿ ಅರ್ಥಿಕವಾಗಿ ವಂಚಿತವಾಗದಂತೆ ಸರಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಸಂಘದ ತಾಲೂಕು ಅಧ್ಯಕ್ಷ ಎಚ್.ಎನ್. ಪಾಟೀಲ ಮನವಿ ಮಾಡಿದರು.

ಶುಕ್ರವಾರ ತಹಸೀಲ್ದಾರ್‌ ಮೂಲಕ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಅರ್ಪಿಸಿದ ಸಂದರ್ಭದಲ್ಲಿ ಮಾತನಾಡಿದರು. ೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ಜುಲೈ ೨೦೨೨ರಿಂದ ಜುಲೈ ೨೦೨೪ರ ಅವಧಿಯಲ್ಲಿ ನಿವೃತ್ತಿ ಹೊಂದಿದ ಸರಕಾರಿ ನೌಕರರಿಗೆ ಡಿಸಿಆರ್‌ಜಿ, ಕಮ್ಯುಟೇಶನ್ ಹಾಗೂ ಗಳಿಕೆ ರಜೆ ನಗದೀಕರಣದಲ್ಲಿ ಆರ್ಥಿಕ ಸೌಲಭ್ಯದಿಂದ ವಂಚಿತವಾಗುವಂತೆ ಆಯೋಗದ ಶಿಫಾರಸು ಮಾಡಿರುವುದನ್ನು ಬದಲಿಸಿ, ಈ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಆರ್ಥಿಕ ಸೌಲಭ್ಯವನ್ನು ಈ ನಂತರ ಪಡೆಯುವ ನೌಕರರಂತೆ ಒದಗಿಸಬೇಕು. ರಾಜ್ಯದಲ್ಲಿ ನಿವೃತ್ತ ನೌಕರರಿಗೆ ಆರ್ಥಿಕ ನಷ್ಟ ಆಗುವುದನ್ನು ತಪ್ಪಿಸಬೇಕು. ನಿವೃತ್ತರಿಗೆ ನ್ಯಾಯ ಒದಗಿಸಲು ಸರಕಾರ ಮುಂದಾಗಬೇಕು. ತಪ್ಪಿದಲ್ಲಿ ರಾಜ್ಯಾದ್ಯಂತ ಹೋರಾಟ ಅನಿವಾರ್ಯವಾಗುತ್ತದೆ. ಈ ಬಗ್ಗೆ ರಾಜ್ಯಾದ್ಯಂತ ಎಲ್ಲ ತಾಲೂಕುಗಳಿಂದ ಸರಕಾರಕ್ಕೆ ಮನವಿ ಅರ್ಪಿಸಲಾಗುತ್ತಿದ್ದು, ನಿವೃತ್ತ ನೌಕರರಿಗೆ ಆರ್ಥಿಕ ತೊಂದರೆಯಾಗದಂತೆ ೭ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಇದೇ ದಿನ ಹಾನಗಲ್ಲ ಶಾಸಕರಾದ ಶ್ರೀನಿವಾಸ ಮಾನೆ ಅವರಿಗೂ ಮನವಿ ಸಲ್ಲಿಸಿ ಸರಕಾರದಲ್ಲಿ ನಮ್ಮ ಬೇಡಿಕೆ ಈಡೇರಲು ಸಹಕರಿಸಬೇಕು ಎಂದು ವಿನಂತಿಸಲಾಗಿದೆ. ಈ ಸಂದರ್ಭದಲ್ಲಿ ತಾಲೂಕು ಘಟಕದ ಉಪಾಧ್ಯಕ್ಷ ಪ್ರೊ. ಸಿ. ಮಂಜುನಾಥ, ಖಜಾಂಚಿ ಅಶೋಕ ದಾಸರ, ಕಾರ್ಯದರ್ಶಿ ಆರ್.ಎಫ್. ತಿರುಮಲೆ, ನಿರ್ದೇಶಕ ಪ್ರೊ. ಮಾರುತಿ ಶಿಡ್ಲಾಪೂರ, ಎಚ್.ಐ. ನಾಯಕ, ಬಿ.ಎಸ್. ಕರಿಯಣ್ಣನವರ ಮೊದಲಾದವರು ಇದ್ದರು.