ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್‌ಶಿಪ್ ನೀಡಲು ಆಗ್ರಹ

| Published : Jan 20 2025, 01:30 AM IST

ಸಾರಾಂಶ

ನಗರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್‌ಶಿಪ್ ತಕ್ಷಣ ಬಿಡುಗಡೆ ಮಾಡಲು, ಮನೆ, ವಸತಿ ನಿರ್ಮಾಣಕ್ಕೆ ಕನಿಷ್ಠ ₹ ಆರು ಲಕ್ಷ ಸಹಾಯಧನ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದವರು ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಮನವಿ ಸಲ್ಲಿಸಿದರು.

ಕೊಪ್ಪಳ:

ಈಗಾಗಲೇ ಖಾಸಗಿಯವರಿಂದ ಆರೋಗ್ಯ ತಪಾಸಣೆ ನಡೆಸುವ ಕಾರ್ಯಕ್ರಮವನ್ನು ತಕ್ಷಣ ನಿಲ್ಲಿಸಿ ಬಿಡುಗಡೆ ಮಾಡಿರುವ ಹಣವನ್ನು ವಾಪಸ್ ಪಡೆಯಬೇಕು. ಆರೋಗ್ಯ ಇಲಾಖೆಯಿಂದ ಉಚಿತ ತಪಾಸಣೆ ನಡೆಸಬೇಕು. 2016ರಿಂದ ಬಾಕಿ ಇರುವ ಎಲ್ಲಾ ಸೌಲಭ್ಯಗಳ ಧನ ಸಹಾಯವನ್ನು ಕೂಡಲೇ ವಿಲೇವಾರಿ ಮಾಡಬೇಕು. 60 ವರ್ಷ ತುಂಬಿರುವ ಫಲಾನುಭವಿಗಳಿಗೆ ಪಿಂಚಣಿಗೆ ಅರ್ಜಿ ಸಲ್ಲಿಸಲು ವಯೋಮಿತಿ ನಿಗದಿ ಮಾಡಬಾರದು ಸೇರಿದಂತೆ ಇತರೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ್ದಾರೆ.

ಮನವಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಕಟ್ಟಡ ಕಾರ್ಮಿಕರ ನಕಲಿ ಗುರುತಿನ ಚೀಟಿಗಳನ್ನು ರದ್ದು ಮಾಡಲಾಗುತ್ತದೆ. ಶ್ರಮ ಸಾಮರ್ಥ್ಯ ಯೋಜನೆ ಮರುಜಾರಿಗೊಳಿಸುವುದಾಗಿ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಎ. ಗಫಾರ್, ಜಿಲ್ಲಾ ಅಧ್ಯಕ್ಷ ತುಕಾರಾಮ ಬಿ. ಪಾತ್ರೋಟಿ, ಜಿಲ್ಲಾ ಉಪಾಧ್ಯಕ್ಷ ಮೌಲಾ ಹುಸೇನ್ ಹಣಗಿ, ಆದಿತ್ಯ ಟಿ. ಪಾತ್ರೋಟಿ, ಪ್ರಸಾದ್ ಕಾಳೆ ಇತರರಿದ್ದರು.