ಸ್ವಚ್ಛ ವಾಹಿನಿ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವಂತೆ ಆಗ್ರಹ

| Published : Jul 16 2024, 12:33 AM IST

ಸ್ವಚ್ಛ ವಾಹಿನಿ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವಂತೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮ ಪಂಚಾಯಿತಿ ಸ್ವಚ್ಛ ವಾಹಿನಿಗಳಲ್ಲಿ ಡ್ರೈವರ್ ಹಾಗೂ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ನಿಗದಿತ ಕೆಲಸ, ಕನಿಷ್ಠ ವೇತನ, ಸೇವಾ ಭದ್ರತೆ ಸೇರಿದಂತೆ ಪ್ರಮುಖ ಸೌಲಭ್ಯಗಳನ್ನು ಒದಗಿಸಬೇಕು ಎಂದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸ್ವಚ್ಛವಾಹಿನಿ ಆಟೋ ಡ್ರೈವರ್ಸ್ ಮತ್ತು ಸಹಾಯಕಿಯರ ಸಂಘಟನೆಯ ರಾಜ್ಯ ಸಂಚಾಲಕ ಡಿ.ಎಂ. ಮಲಿಯಪ್ಪ ಆಗ್ರಹಿಸಿದರು.

ಹಾವೇರಿ: ಗ್ರಾಮ ಪಂಚಾಯಿತಿ ಸ್ವಚ್ಛ ವಾಹಿನಿಗಳಲ್ಲಿ ಡ್ರೈವರ್ ಹಾಗೂ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ನಿಗದಿತ ಕೆಲಸ, ಕನಿಷ್ಠ ವೇತನ, ಸೇವಾ ಭದ್ರತೆ ಸೇರಿದಂತೆ ಪ್ರಮುಖ ಸೌಲಭ್ಯಗಳನ್ನು ಒದಗಿಸಬೇಕು ಎಂದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸ್ವಚ್ಛವಾಹಿನಿ ಆಟೋ ಡ್ರೈವರ್ಸ್ ಮತ್ತು ಸಹಾಯಕಿಯರ ಸಂಘಟನೆಯ ರಾಜ್ಯ ಸಂಚಾಲಕ ಡಿ.ಎಂ. ಮಲಿಯಪ್ಪ ಆಗ್ರಹಿಸಿದರು. ನಗರದ ಮುರುಘರಾಜೇಂದ್ರಮಠದಲ್ಲಿ ಸೋಮವಾರ ಸ್ವಚ್ಛವಾಹಿನಿ ಆಟೋ ಡ್ರೈವರ್ಸ್ ಹಾಗೂ ಸಹಾಯಕಿಯರ ಜಿಲ್ಲಾ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಸರ್ಕಾರದ ಪ್ರಮುಖ ಅಭಿಯನವಾದ ಸ್ವಚ್ಛ ಭಾರತ್ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವುದಾಗಿ ಕೇಂದ್ರ ಸರ್ಕಾರವು ಉಲ್ಲೇಖ ಮಾಡುತ್ತಿದೆ. ಗ್ರಾಮಗಳ ಸ್ವಚ್ಛತೆಯ ಜವಾಬ್ದಾರಿ ವಹಿಸಿರುವಂತಹ ಸ್ವಚ್ಛವಾಹಿನಿ ನೌಕರರು ಕಸ ವಿಲೆವಾರಿ ಮಾಡುವುದರಲ್ಲಿ ಪ್ರಮುಖರಾಗಿದ್ದು, ಕಸವನ್ನು ಬೇರ್ಪಡಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಇವರಿಗೆ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿವೆ. ರಾಜ್ಯ ಸರ್ಕಾರದಿಂದ ತರಬೇತಿ ಪಡೆದ ಸ್ವಚ್ಛವಾಹಿನಿ ನೌಕರರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಕೊಡುತ್ತಿಲ್ಲ. ಸ್ವಚ್ಛವಾಹಿನಿ ಗಾಡಿಗಳಿಗೆ ವಿಮೆ ನವೀಕರಣ ಮಾಡಿರುವುದಿಲ್ಲ ಎಂದರು.ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಸರ್ಕಾರವು ಜೀವದ ಹಂಗನ್ನು ತೊರೆದು ಸ್ವಚ್ಛತಾ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ವೇತನವನ್ನು ಬಾಕಿ ಉಳಿಸಿಕೊಂಡಿದೆ. ಸ್ವಚ್ಛತಾ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣಾ ಸಲಕರಣೆಗಳನ್ನು ಒದಗಿಸುತ್ತಿಲ್ಲ. ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುವ ಸ್ವಚ್ಛವಾಹಿನಿ ಮಹಿಳಾ ಸಿಬ್ಬಂದಿಗಳು ಹಲವಾರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಇದ್ದು ಅವರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಆರೋಗ್ಯ ವಿಮೆ ಇರುವುದಿಲ್ಲ ಹಾಗೂ ಸರ್ಕಾರದಿಂದಲೇ ತರಬೇತಿ ಪಡೆದ ಎಲ್ಲಾ ಸ್ವಚ್ಛವಾಹಿನಿ ನೌಕರರಿಗೆ ವರ್ಷಪೂರ್ತಿ ಕೆಲಸ ಕೊಡದೆ ಅಮಾಯಕ ಮಹಿಳೆಯರಿಗೆ ಅನ್ಯಾಯವಾಗುತ್ತಿದೆಯಲ್ಲದೇ ಗ್ರಾಮಗಳ ನೈರ್ಮಲ್ಯಕರಣಕ್ಕೆ ಧಕ್ಕೆಯಾಗಿದೆ ಎಂದರು. ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ಸ್ವಚ್ಛತಾ ಕೆಲಸವು ಕಾಯಂ ಕೆಲಸದ ಸ್ವರೂಪವಾಗಿದ್ದು ಸರ್ಕಾರ ಕನಿಷ್ಠ ವೇತನ ೨೬೦೦೦ ರು. ನಿಗದಿಪಡಿಸಬೇಕು. ಸರ್ಕಾರದಿಂದ ತರಬೇತಿ ಪಡೆದ ಮಹಿಳಾ ಡ್ರೈವರ್‌ಗಳಿಗೆ ಇದುವರೆಗೂ ಆಟೋಗಳನ್ನು ಕೊಟ್ಟಿಲ್ಲ. ಕೆಟ್ಟು ನಿಂತಿರುವ ಆಟೋಗಳ ದುರಸ್ತಿಯನ್ನು ಮಾಡಿಸುತ್ತಿಲ್ಲ. ಸ್ವಚ್ಛವಾಹಿನಿ ಮಹಿಳೆಯರ ಕುಂದುಕೊರತೆಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಬಳಿಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಮುಖಂಡರಾದ ವೀಣಾ ಎಸ್. ಮಿಳ್ಳೆಮ್ಮನವರ, ನಾಗರತ್ನ ಜಿಂಗಿ, ಹೂವಕ್ಕ ಪವಾರ, ಮಮತಾ ಬಾರ್ಕಿ, ರಚನಾ ಎನ್. ಹರಿಜನ್, ಮೀನಾಕ್ಷಿ ಹೀಲದಹಳ್ಳಿ, ನಗೀನಾಬಾನು ನದಾಫ, ಶಮೀನಾಬಾನು ತಡಸ, ದೀಪಾ ಕಂಬಳಿ, ಶೇಖವ್ವ ಹುಲಗೂರ, ದೀಪಾ ಓಲೇಕಾರ, ಸುಜಾತಾ ಪೂಜಾರ, ನಾಗಮ್ಮ ರಾಮಣ್ಣವರ ಸೇರಿದಂತೆ ಇತರರು ಇದ್ದರು.