ಕನ್ನಡಪ್ರಭ ವಾರ್ತೆ ಮುಧೋಳನಗರದ ಸಾರ್ವಜನಿಕ ಆಸ್ಪತ್ರೆ ಜನಸಾಮಾನ್ಯರಿಗೆ ಸರ್ಕಾರಿ ಆರೋಗ್ಯ ಸೇವಾ ಕೇಂದ್ರವಾಗಿದ್ದು, ಆದರೆ, ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರು ಸೂಕ್ತ ಚಿಕಿತ್ಸೆ ಪಡೆಯದೆ ತೊಂದರೆ ಎದುರಿಸುತ್ತಿದ್ದಾರೆ ಎಂದು ಭೀಮ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಸುನೀಲ ಕಂಬೋಗಿ ಹೇಳಿದರು.
ಕನ್ನಡಪ್ರಭ ವಾರ್ತೆ ಮುಧೋಳ
ನಗರದ ಸಾರ್ವಜನಿಕ ಆಸ್ಪತ್ರೆ ಜನಸಾಮಾನ್ಯರಿಗೆ ಸರ್ಕಾರಿ ಆರೋಗ್ಯ ಸೇವಾ ಕೇಂದ್ರವಾಗಿದ್ದು, ಆದರೆ, ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರು ಸೂಕ್ತ ಚಿಕಿತ್ಸೆ ಪಡೆಯದೆ ತೊಂದರೆ ಎದುರಿಸುತ್ತಿದ್ದಾರೆ ಎಂದು ಭೀಮ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಸುನೀಲ ಕಂಬೋಗಿ ಹೇಳಿದರು.ಮಂಗಳವಾರ ನಗರದ ಡಾ.ಅಂಬೇಡ್ಕರ್ ವೃತ್ತದಿಂದ ಸರ್ಕಾರಿ ಆಸ್ಪತ್ರೆಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ರೋಗಗಳಿಗೆ ಸಂಬಂಧಿಸಿದ ತಜ್ಞ ವೈದ್ಯರ ಕೊರತೆ, ವೈದ್ಯಕೀಯ ಸಿಬ್ಬಂದಿಯ ಅಸಮರ್ಪಕ ಲಭ್ಯತೆ, ಅಗತ್ಯ ಚಿಕಿತ್ಸೆಯಲ್ಲಿ ವಿಳಂಬ ಹಾಗೂ ಆಸ್ಪತ್ರೆಯ ಕೆಲ ವೈದ್ಯರನ್ನು ನಿಯೋಜನೆಯ ಮೇಲೆ ಬೇರೆ ಸರ್ಕಾರಿ ಆಸ್ಪತ್ರೆಗಳಿಗೆ ನಿಯೋಜಿಸಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಜನರು ಬೇರೆ ಆಸ್ಪತ್ರೆಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದರಿಂದ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೇವೆಗಳು ಸಿಗದೆ ಪರದಾಡುವಂತಾಗಿದೆ ಎಂದರು.
ಸಂಸ್ಥೆಯ ರಾಜ್ಯ ಸಂಚಾಲಕ ಅನಿಲ ಬರಗಿ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಅವ್ಯವಸ್ಥೆ ಯಿಂದ ಕೂಡಿದೆ, ಮುಧೋಳ ಸರ್ಕಾರಿ ಆಸ್ಪತ್ರೆಯಿಂದ ಬೇರೆ ಆಸ್ಪತ್ರೆಗೆ ನಿಯೋಜಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಖಾಲಿ ಇರುವ ವೈದ್ಯರ ಹಾಗೂ ಸಿಬ್ಬಂದಿ ನೇಮಿಸಿ ಆಸ್ಪತ್ರೆಯಲ್ಲಿ ಅವಶ್ಯಕತೆಯನ್ನು ಶೀಘ್ರದಲ್ಲಿಯೇ ಸರಿಪಡಿಸಬೇಕು. ಸಾರ್ವಜನಿಕ ಆಸ್ಪತ್ರೆಯಲ್ಲಿ ಜನರಿಗೆ ಗುಣಮಟ್ಟದ ಮತ್ತು ಸಮಯೋಚಿತ ಚಿಕಿತ್ಸೆ ದೊರೆಯುವಂತೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಹಾಗೂ ಮುಧೋಳ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ನಿಯೋಜಿಸಬೇಕೆಂದು ಆಗ್ರಹಿಸಿದರು.ಡಿಎಚ್‍ಒ ಡಾ.ರಾಜಕುಮಾರ ಯರಗಲ್ಲ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ಇಲ್ಲಿಂದ ನಿಯೋಜನೆಗೊಂಡ ನಾಲ್ಕು ವೈದ್ಯರ ನಿಯೋಜನೆ ಆದೇಶವನ್ನು ರದ್ದು ಮಾಡಲಾಗಿದೆ ಎಂದು ಪತ್ರಗಳನ್ನು ಪ್ರತಿಭಟನಾಕಾರರಿಗೆ ತೋರಿಸಿದರು, ತಹಸೀಲ್ದಾರ ಡಾ.ಚಿಕ್ಕಪ್ಪ ನಾಯಕ ಅವರು ಮನವಿ ಪತ್ರ ಸ್ವೀಕರಿಸಿ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ತಾಲೂಕು ವೈದ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ, ಡಾ.ಅಶೋಕ ಸೂರ್ಯವಂಶಿ, ಮುಖಂಡರಾದ ಸದಾಶಿವ ಬಾಡಗಂಡಿ, ಸುಂದರ ದೊಡಮನಿ, ಪುಟ್ಟು ಮೇತ್ರಿ, ಮಹಾದೇವಿ ಅಮಲಝರಿ, ಗೀತಾ, ರವಿ ಬೆಳಗಲಿ, ಮಹಾದೇವ ಮೀಸಿ, ಭೀಮಸಿ ಭಜಂತ್ರಿ, ಶೇಖರ ಬಾಗಿ ಮುಂತಾದವರು ಇದ್ದರು.ಮುಧೋಳ ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರು ಅಂಥವರಿಗೆ ಚಿಕಿತ್ಸೆ ಸಿಗದೆ ಪರದಾಡುವಂತಾಗಿದೆ, ಕೂಡಲೇ ಅವ್ಯವಸ್ಥೆ ಸರಿ ಪಡಿಸದಿದ್ದರೆ ಉಗ್ರ ಹೋರಾಟ ಖಚಿತ.
ಲವಿತ್ ಮೇತ್ರಿ, ರಾಜ್ಯ ಘಟಕದ ಅಧ್ಯಕ್ಷ,ಭೀಮ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್