ಬಿತ್ತನೆ ಬೀಜಗಳ ದರ ಕಡಿಮೆ ಮಾಡುವಂತೆ ಆಗ್ರಹ

| Published : Jun 02 2024, 01:45 AM IST

ಬಿತ್ತನೆ ಬೀಜಗಳ ದರ ಕಡಿಮೆ ಮಾಡುವಂತೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಬಿತ್ತನೆ ಬೀಜಗಳ ದರ ಕಡಿಮೆ ಮಾಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಬಿತ್ತನೆ ಬೀಜಗಳ ದರ ಕಡಿಮೆ ಮಾಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕೆ. ಕುಲಕರ್ಣಿ ಮಾತನಾಡಿ, ರಾಜ್ಯದಲ್ಲಿ ಹಿಂದೆದೂ ಕಂಡರಿಯದಂತ ಭೀಕರ ಬರಗಾಲ ಆವರಿಸಿ ಬಿತ್ತನೆ ಮಾಡಿದ ಎಲ್ಲ ಬೆಳೆಗಳು ಹಾಳಾಗಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹದರ ಮಧ್ಯ ಸರ್ಕಾರ ರೈತರಿಗೆ ಗಾಯದ ಮೇಲೆ ಬರೆ ಎಳೆದಿದೆ ರಾಜ್ಯ ಸರ್ಕಾರ ಜನ ವಿರೋಧಿ ಹಾಗೂ ರೈತ ವಿರೋಧಿ ಅನುಪಯುಕ್ತ ಯೋಜನೆಗಳನ್ನು ಜಾರಿಗೆ ತಂದು ರೈತರಿಗೆ ಸಿಗಬೇಕಾದ ಸವಲತ್ತುಗಳನ್ನು ಕೊಡುತ್ತಿಲ್ಲ. ಈಗ ಮುಂಗಾರು ಹಂಗಾಮಿನ ಬೆಳೆ ಬೆಳೆಯಲು ಬಿತ್ತನೆ ಕಾರ್ಯಕ್ಕೆ ಮುಂದಾಗುತ್ತಿದ್ದ ರೈತರಿಗೆ ಬಿತ್ತನೆ ಬೀಜದದರ ಹೆಚ್ಚಿಸುವ ಮೂಲಕ ರೈತರಿಗೆ ಮತ್ತಷ್ಟು ಸಾಲದ ಹೊರೆ ಹಾಕಲು ಮುಂದಾಗಿದೆ ಎಂದು ದೂರಿದರು.

ಕಳೆದ ವರ್ಷ ಐದು ಕೆ.ಜಿ. ತೊಗರಿ ಬೀಜಕ್ಕೆ ೫೨೫ ರೂ.ಗಳವರೆಗೆ ಇದ್ದ ದರವನ್ನು ೭೭೦ ಕ್ಕೆ ಏರಿಕೆ ಮಾಡಿದೆ. ಹೆಸರು ೫ ಕೆ.ಜಿ.ಗೆ ೫೦೧ ರಿಂದ ೭೮೫ ರೂ.ಗಳಿಗೆ ಇನ್ನುಳಿದ ಬಿತ್ತನೆ ಬೀಜಗಳ ದರ ದುಪ್ಪಟ್ಟು ಹೆಚ್ಚಿಸಲಾಗಿದೆ ಮತ್ತು ಗೊಬ್ಬರದ ದರವನ್ನು ಹೆಚ್ಚಿಸಲಾಗಿದೆ. ಇದರಿಂದ ರೈತರಿಗೆ ಆರ್ಥಿಕವಾಗಿ ಹೊರೆ ಬೀಳುತ್ತಿದೆ. ಆದ್ದರಿಂದ ಸರ್ಕಾರ ಎಚ್ಚೆತ್ತುಕೊಂಡು ಹೆಚ್ಚಿಸಿದ ಬಿತ್ತನೆ ಬೀಜಗಳ ದರವನ್ನು ಮೊದಲಿನ ದರಕ್ಕೆ ವಿತರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಳಿಕೋಟಿ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಗುರಲಿಂಗಪ್ಪ ಪಡಸಲಗಿ, ಚಂದ್ರಾಮ ತೆಗ್ಗಿ, ಚನಬಸಪ್ಪ ಸಿಂಧೂರ, ನಿಂಗರಾಯ ಮುತ್ಯಾ, ದಾವಲಸಾ ನಧಾಪ್, ಮಹೇಶ ಯಡಹಳ್ಳಿ, ಮಲ್ಲಪ್ಪ ಪಡಸಲಗಿ, ಗಿರಿಮಲ್ಲಪ್ಪ ದೊಪಡಮನಿ, ವಿಠ್ಠಲ ಬಿರಾದಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಸ್ಥಳ: ವಿಜಯಪು.

.

.

ತಮ್ಮ ವಿಶ್ವಾಸಿಕರುದಿನಾಂಕ: ೩೦-೦೫-೨೦೨.

.

.

ಅರವಿಂದ ಕುಲಕರ್ಣಿ

.

.

.

.

ಮೊ: ೮೭೨೨೩ ೦೩೮೮೧