ರೈತರ ಬೆಳೆ ರಕ್ಷಣೆಗಾಗಿ ಡಿ.31ರವರೆಗೆ ಎಡದಂಡೆ ನಾಲೆಗೆ ನೀರು ಹರಿಸಬೇಕು. ಬೆಳೆಹಾನಿ ಯಾದ ಪ್ರತಿ ಎಕರೆಗೆ 50 ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತುಂಗಭದ್ರಾ ಜಲಾಶಯ ರೈತ ಒಕ್ಕೂಟ ಹೋರಾಟ ಸಮಿತಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ನಗರದ ಮಿನಿವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಸೋಮ ವಾರ ಉಪವಾಸ ಧರಣಿ ಸತ್ಯಾಗ್ರಹ ನಡೆಸಿದವು.
ಕನ್ನಡಪ್ರಭ ವಾರ್ತೆ ಸಿಂಧನೂರು
ರೈತರ ಬೆಳೆ ರಕ್ಷಣೆಗಾಗಿ ಡಿ.31ರವರೆಗೆ ಎಡದಂಡೆ ನಾಲೆಗೆ ನೀರು ಹರಿಸಬೇಕು. ಬೆಳೆಹಾನಿ ಯಾದ ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತುಂಗಭದ್ರಾ ಜಲಾಶಯ ರೈತ ಒಕ್ಕೂಟ ಹೋರಾಟ ಸಮಿತಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ನಗರದ ಮಿನಿವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಸೋಮ ವಾರ ಉಪವಾಸ ಧರಣಿ ಸತ್ಯಾಗ್ರಹ ನಡೆಸಿದವು.ಎಡದಂಡೆ ನಾಲೆಯ ನೀರನ್ನೇ ನಂಬಿ ರೈತರು ಭತ್ತ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಈಗಾಗಲೇ ರೈತರು ಬೀಜ, ಗೊಬ್ಬರ, ಔಷಧಿ, ಕೂಲಿ ಹಾಗೂ ಕೃಷಿ ಚಟುವಟಿಕೆ ಗಳಿಗಾಗಿ ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿದ್ದಾರೆ. ಇಂತಹ ಸಂದರ್ಭದಲ್ಲಿ ನಾಲೆಗೆ ಸಮರ್ಪಕವಾಗಿ ನೀರು ಹರಿಸದಿದ್ದರೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಮತ್ತು ನೀರಾವರಿ ಇಲಾಖೆ ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ಡಿ. 31ರವರೆಗೆ ಎಡದಂಡೆ ನಾಲೆಗೆ ನೀರು ಹರಿಸುವ ಕುರಿತು ತಕ್ಷಣವೇ ಸೂಕ್ತ ನಿರ್ಧಾರ ಕೈಗೊಳ್ಳ ಬೇಕು. ಒಂದು ವೇಳೆ ನೀರು ಹರಿಸಲು ಸಾಧ್ಯವಾಗದಿದ್ದರೆ, ಸರ್ಕಾರ ರೈತರ ಬೆಳೆ ನಷ್ಟದ ಜವಾಬ್ದಾರಿಯನ್ನು ಹೊತ್ತು ಪ್ರತಿ ಎಕರೆಗೆ ರೂ.50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಧರಣಿ ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯ ದರ್ಶಿ ಬಸವರಾಜ ಗೋಡಿಹಾಳ, ಜೆಡಿಎಸ್ ಅಧ್ಯಕ್ಷ ಬಸವರಾಜ ನಾಡಗೌಡ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಭೀಮನಗೌಡ ಮಾತನಾಡಿದರು. ಉಪವಾಸ ಸತ್ಯಾಗ್ರಹ ನಡೆಸಿದ ಸಂಚಾಲಕರಾದ ನಿರುಪಾದಿ ಕೆ. ಗೋಮರ್ಸಿ, ಬಸವರಾಜ ಗೋಡಿಹಾಳ, ಶಿವರಾಜ ಸಾಸಲಮರಿ, ಮಲ್ಲಿಕಾರ್ಜುನ ರೆಡ್ಡಿ, ಸಿದ್ದನಗೌಡ ಗೋನವಾರ ಅವರ ಆರೋಗ್ಯ ತಪಾಸಣೆಯನ್ನು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡೆ ನಾಗವೇಣಿ ಪಾಟೀಲ್ ತುರ್ವಿಹಾಳ, ರೈತ ಮುಖಂಡರಾದ ಪರ್ವತ ರೆಡ್ಡಿ, ಗಿರಿಬಾಬು, ಹನುಮಪ್ಪ ತಿಡಿಗೋಳ, ನಾಗರಾಜ ಬಿಂಗಿ, ನಿರುಪಾದೆಪ್ಪ ಸುಲ್ತಾನಪುರ, ಮಲ್ಲಿಕಾರ್ಜುನ ರೆಡ್ಡಿ, ಹುಲುಗಪ್ಪ, ಅಯ್ಯಪ್ಪ ಮೇಟಿ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.-----
16ಕೆಪಿಎಸ್ಎನ್ಡಿ1: ಸಿಂಧನೂರಿನ ತುಂಗಭದ್ರಾ ಜಲಾಶಯ ರೈತ ಒಕ್ಕೂಟ ಹೋರಾಟ ಸಮಿತಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಿನಿವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಸೋಮವಾರ ನಡೆದ ಉಪವಾಸ ಧರಣಿಯನ್ನು ನಡೆಸಲಾಯಿತು.