ಮಹಾಲಿಂಗಪುರ: ಸಮೀಪದ ಚಿಮ್ಮಡದಲ್ಲಿ ಸೆ.24ರಂದು ನಡೆಯಲಿರುವ ಪ್ರಭುಲಿಂಗೇಶ್ವರ ಜಾತ್ರೆಗೆ ಲಕ್ಷಾಂತರ ಜನ ಸೇರುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. ಗ್ರಾಮದ ಮಾರ್ಗವಾಗಿ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಗೆ 3 ದಿನ ನೀರು ಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರತಿವರ್ಷ ಜಾತ್ರೆ ಸಮಯದಲ್ಲಿ ಕಾಲುವೆಗೆ ನೀರು ಹರಿಸಲಾಗುತಿತ್ತು. ಆದರೆ, ಈ ಬಾರಿ ಸ್ಥಗಿತಗೊಳಿಸಿದ್ದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ತಕ್ಷಣ ನೀರು ಹರಿಸಿದಲ್ಲಿ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೀರಾವರಿ ಇಲಾಖೆಯ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಮುಖ್ಯ ಕಾರ್ಯ ನಿರ್ವಾಹಕರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ ಎಂದು ಗ್ರಾಮದ ಪ್ರಭುಲಿಂಗೇಶ್ವರ ದೇವಸ್ಥಾನ ಉಸ್ತುವಾರಿ ಸಮಿತಿ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.