The taluk committee of the State Farmers' Association has urged authorities to take action to fulfill various demands, including the removal of illegal pipelines installed on distributaries within the Tungabhadra Left Bank Canal network.

ಮಾನ್ವಿ: ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿನ ಉಪ ಕಾಲುವೆಗಳಿಗೆ ಅಳವಡಿಸಿರುವ ಅಕ್ರಮ ಪೈಪ್‌ಲೈನ್‌ಗಳನ್ನು ತೆರವುಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಕ್ರಮವಹಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಸಮಿತಿ ಆಗ್ರಹಿಸಿದೆ.

ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಸಮಿತಿ ಪದಾಧಿಕಾರಿಗಳು ತಹಸೀಲ್ದಾರ್‌ ಗೆ ಮನವಿ ಸಲ್ಲಿಸಿದ್ದಾರೆ. ತಾಲೂಕಿನ ಗ್ರಾಮೀಣ ಭಾಗದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗದ ಕಾರಣಕ್ಕೆ ರೈತರ ಪಂಪ್ ಸೇಟ್ ಗಳಿಂದ ಬೆಳೆಗೆ ನೀರು ಹರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜೆಸ್ಕಾಂ ಅಧಿಕಾರಿಗಳು ನಿರಂತರ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರೈತರ ಖಾತೆಗೆ ಜೋಳದ ಹಣ ಜಮಾ ಮಾಡಬೇಕು. ತಾಲೂಕಿನ ಪಶು ಆಸ್ಪತ್ರೆಗಳಲ್ಲಿ ಖಾಲಿ ಇರುವ ಪಶುವೈದ್ಯರ ಹಾಗೂ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡಬೇಕು. ಗ್ರಾಮೀಣ ಭಾಗದ ಶಾಲಾ ವಿದ್ಯಾರ್ಥಿಗಳು ಶಾಲೆಗಳಿಗೆ ಹೊಗುವುದಕ್ಕೆ ಅನುಕೂಲವಾಗುವಂತೆ ಬಸ್ ಸೌಕರ್ಯ ಕಲ್ಪಿಸಬೇಕು. ಹಾಗೂ ಕಾಲುವೆಗಳ ಸೀಲ್ಟ್ ಸರ್ವಿಸ್ ರಸ್ತೆಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಸಂಘದ ರಾಜ್ಯಕಾರ್ಯದರ್ಶಿ ಸೂಗುರಯ್ಯ ಆರ್.ಎಸ್.ಮಠ, ಜಿಲ್ಲಾ ಕಾರ್ಯಧ್ಯಕ್ಷರಾದ ಬಸವರಾಜ ಮಾಲಿ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರೆಡ್ಡಿ ಪಾಟೀಲ್, ತಾಲೂಕಾಧ್ಯಕ್ಷ ಸಿದ್ದಯ್ಯಸ್ವಾಮಿ ,ಅಮರೇಶ ಅಲ್ದಾಳ್, ಚಾಮರಸ ಜಾನೇಕಲ್, ತಾ.ಕಾರ್ಯದರ್ಶಿ ಬಸವರಾಜ ತಡಕಲ್ ಸೇರಿ ಇತರರು ಇದ್ದರು.