ಸಾರಾಂಶ
ಗಜೇಂದ್ರಗಡ: ಕೇಂದ್ರ ಸರ್ಕಾರ ಜಾರಿಗೆ ತರಲು ಹೋರಾಟಿರುವ ಕಾರ್ಮಿಕ ವಿರೋಧಿ ಕಾನೂನು ವಾಪಸಾತಿ ಸೇರಿದಂತೆ ಬೆಲೆ ಏರಿಕೆ ಖಂಡಿಸಿ ಕನಿಷ್ಠ ಕೂಲಿ ಉದ್ಯೋಗ ಭದ್ರತೆ ಒದಗಿಸಲು ಒತ್ತಾಯಿಸಿ ಜಂಟಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮೇ ೨೦ರಂದು ದೇಶವ್ಯಾಪ್ತಿ ಮುಷ್ಕರ ಹಿನ್ನೆಲೆ ಸಮೀಪದ ಮ್ಯಾಕಲ್‌ಝರಿ ಗ್ರಾಮದಲ್ಲಿ ಪ್ರಚಾರ ಜಾಥಾ ನಡೆಯಿತು.
ಜಾಥಾಕ್ಕೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಎಂ.ಎಸ್. ಹಡಪದ ಮಾತನಾಡಿ, ಕಾರ್ಪೊರೇಟ್‌ಗಳಿಗೆ ಕಡಿವಾಣವಿಲ್ಲದ ಲಾಭ ಗಳಿಸುವ ರಹದಾರಿ ಆಗಲಿದೆ. ಕಾರ್ಮಿಕರನ್ನು ನವಗುಲಾಮಗಿರಿಗೆ ತಳ್ಳಲಿರುವ ಈ ಸಂಹಿತೆ ರದ್ದುಪಡಿಸಿ ಕಾರ್ಮಿಕರ ಹಿತ ಕಾಯಲು ಮುಂದಾಗಬೇಕು ಎಂದ ಅವರು, ತಾಲೂಕಿನ ಕೃಷಿ ಚಟುವಟಿಕೆ ಬಲಪಡಿಸಲು ಸ್ಥಳೀಯ ಬೇಡಿಕೆಗಳಾದ ಈ ಭಾಗದ ಕರೆಗಳನ್ನು ತುಂಬಿಸಬೇಕು. ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ತಾಲೂಕಾಸ್ಪತ್ರೆ ಮೇಲ್ದರ್ಜೆಗೆ ಏರಿಸಿ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೆಲವು ಕಾರ್ಮಿಕ ವರ್ಗದ ವಿರೋಧಿ ನೀತಿ ಖಂಡಿಸಿ ಅಂಗನವಾಡಿ, ಬಿಸಿಯೂಟ, ಗ್ರಾಪಂ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೇ ೨೦ರಂದು ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದರು.ರಾಜ್ಯದಲ್ಲಿ ದುಡಿತದ ಅವಧಿಯನ್ನು ದಿನಕ್ಕೆ ೧೨ ಗಂಟೆಗೆ ಹೆಚ್ಚಿಸಿರುವ ಆದೇಶ ಕೂಡಲೇ ಹಿಂಪಡೆಯಬೇಕು. ಜೀವನ ಯೋಗ್ಯ ಕನಿಷ್ಠ ವೇತನ ₹೩೬,೦೦೦ ನಿಗದಿ ಮಾಡಬೇಕು. ಸಾರ್ವತ್ರಿಕ ಪಿಂಚಣಿ ಜಾರಿಗೊಳಿಸಿ ಕನಿಷ್ಠ ₹ ೮೦೦೦ ಪಿಂಚಣಿ ನೀಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮತ್ತು ನಗದೀಕರಣ ನಿಲ್ಲಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ದಿನದ ಕೂಲಿ ₹೬೦೦ಕ್ಕೆ ದುಡಿತದ ದಿನಗಳನ್ನು ೨೦೦ಕ್ಕೆ ಹೆಚ್ಚಿಸಬೇಕು. ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸ್ಟೀಮ್ ಕಾರ್ಮಿಕರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಬೇಕು. ಅಸಂಘಟಿತ ವಲಯದ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತಾ ಸೌಲಭ್ಯ ಜಾರಿಗೊಳಿಸಬೇಕು ಎಂದ ಆಗ್ರಹಿಸಿದ ಅವರು, ಗುತ್ತಿಗೆ ಮುಂತಾದ ಕಾಯಂಯೇತ್ತರರ ಕಾಯಂಗೆ ಶಾಸನ ರೂಪಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು ಮತ್ತು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು. ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ರಾಜ್ಯದಲ್ಲಿ ರೈತ ವಿರೋಧಿ ತಿದ್ದುಪಡಿ ಕೃಷಿ ಕಾಯ್ದೆ ವಾಪಸ್ ಪಡೆಯಬೇಕು. ಅತ್ಯುನ್ನತ ತ್ರಿಪಕ್ಷೀಯ ಸಂಸ್ಥೆಯಾದ ಭಾರತೀಯ ಕಾರ್ಮಿಕ ಸಮ್ಮೇಳನ (ಐಎಲ್‌ಸಿ) ನಡೆಸಬೇಕು ಎಂದು ಒತ್ತಾಯಿಸಿದರು.