ಸಂವಿಧಾನದ 371(ಜೆ )ಗೆ ತಿದ್ದುಪಡಿ ಮಾಡಲು ತಾವು ಮುಖ್ಯಮಂತ್ರಿಗಳ ಮನವೊಲಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಕಳಿಸಿಕೊಡಬೇಕು ಹಾಗೂ ಮೀಸಲಾತಿಗೆ ಸೇರ್ಪಡೆಯಾಗುವ ವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸೌಲಭ್ಯಗಳನ್ನು ಜಿಲ್ಲೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ 371ಜೆ ಹೋರಾಟ ಸಮಿತಿ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಂವಿಧಾನದ 371(ಜೆ )ಗೆ ತಿದ್ದುಪಡಿ ಮಾಡಲು ತಾವು ಮುಖ್ಯಮಂತ್ರಿಗಳ ಮನವೊಲಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಕಳಿಸಿಕೊಡಬೇಕು ಹಾಗೂ ಮೀಸಲಾತಿಗೆ ಸೇರ್ಪಡೆಯಾಗುವ ವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸೌಲಭ್ಯಗಳನ್ನು ಜಿಲ್ಲೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ 371ಜೆ ಹೋರಾಟ ಸಮಿತಿ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹಾಗೂ ಶಾಸಕರಾದ ಸಿ.ಎಸ್.ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಸಚಿವರು ಹಾಗೂ ಶಾಸಕರುಗಳು ಹೋರಾಟ ಸಮಿತಿ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ 371ಜೆ ಮೀಸಲಾತಿ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ, ಎನ್.ಸುರೇಶಕುಮಾರ, ಲಾಯಪ್ಪ ಇಂಗಳೆ, ಸುರೇಶ ಬಿಜಾಪುರ, ಚಂದ್ರಶೇಖರ ಹೊಸಮನಿ, ಅನಿಲ ಇಕ್ಕಡೆ, ಮಲ್ಲಿಕಾರ್ಜುನ ಬಟಗಿ, ಶರಣಗೌಡ ಪಾಟೀಲ, ಮಲ್ಲನಗೌಡ ಬಿರಾದಾರ, ಸಂಜೀವ ಪಾಟೀಲ, ನೀಲಾಂಬಿಕಾ ಬಿರಾದಾರ, ಜಗದೇವ ಸೂರ್ಯವಂಶಿ, ಎಂ.ಆರ್‌.ಗುರಿಕಾರ, ವಸಂತ ಬೈರಾಮಡಿ, ಗಿರೀಶ ಕಲಘಟಗಿ, ಅಂಬಣ್ಣ ಗುನ್ನಾಪುರ, ಅಶೋಕ ಚೋಳಕೆ, ಸಂತೋಷ ಕಲಗುಡಿ ಇದ್ದರು.