ಹೂ, ಹಣ್ಣು ಖಾಸಗಿ ಮಾರುಕಟ್ಟೆ ಎಪಿಎಂಸಿಗೆ ಸ್ಥಳಾಂತರಿಸಲು ಆಗ್ರಹ

| Published : Sep 25 2024, 12:54 AM IST

ಹೂ, ಹಣ್ಣು ಖಾಸಗಿ ಮಾರುಕಟ್ಟೆ ಎಪಿಎಂಸಿಗೆ ಸ್ಥಳಾಂತರಿಸಲು ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ ನಗರದಲ್ಲಿರುವ ಹೂ, ಹಣ್ಣು ಮಾರಾಟ ಮಾಡುತ್ತಿರುವ ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ ನೇತೃತ್ವದಲ್ಲಿ ರೈತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ನಗರದಲ್ಲಿರುವ ಹೂ, ಹಣ್ಣು ಮಾರಾಟ ಮಾಡುತ್ತಿರುವ ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ ನೇತೃತ್ವದಲ್ಲಿ ರೈತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರದಲ್ಲಿ ಕಳೆದ ಹಲವಾರು ವರ್ಷಗಳಿಂದ ಖಾಸಗಿ ಮಾರುಕಟ್ಟೆಗಳಲ್ಲಿ ಕಾನೂನು ಬಾಹೀರವಾಗಿ ಹೂ, ಹಣ್ಣು, ಹುಣಸೆಹಣ್ಣು ಮತ್ತು ಬಾಳೆಹಣ್ಣು ಮಾರಾಟ ಮಾಡಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಜಾಣ ಮೌನ ವಹಿಸಿದ್ದಾರೆ. ಇದರಿಂದಾಗಿ ರೈತರಿಗೆ ಆರ್ಥಿಕವಾಗಿ ನಷ್ಟವಾಗುತ್ತಿದೆ. ಈ ಎಲ್ಲ ಖಾಸಗಿ ಮಾರುಕಟ್ಟೆಗಳನ್ನು ಎಂಪಿಎಂಸಿಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮದಡಿ ಪಾರದರ್ಶಕವಾಗಿ ಕೃಷಿ ಉತ್ಪನ್ನಗಳ ಮಾರಾಟ ವ್ಯವಸ್ಥೆಗೆ ವ್ಯವಸ್ಥೆ ಮಾಡಬೇಕು. ಕಾನೂನು ಉಲ್ಲಂಘನೆ, ಅನಧಿಕೃತವಾಗಿ ಮಾರಾಟ, ಕಮೀಷನ್ ವಸೂಲಿ, ಹಮಾಲಿ, ತೂಕ, ವಿನಾಕರಣ ರೈತರ ಹಣ ಕಡಿತ ಮತ್ತು ಕಾನೂನು ಬಾಹಿರವಾಗಿ ಖರ್ಚು ವೆಚ್ಚಗಳ ಕಡಿತದ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ರೈತರ ಕೃಷಿ ಉತ್ಪನ್ನಗಳನ್ನು ಜಿಲ್ಲಾ, ತಾಲೂಕು ಹೋಬಳಿಗಳಲ್ಲಿ ಎಪಿಎಂಸಿ ಮುಖ್ಯ ಮಾರುಕಟ್ಟೆ, ಉಪಮಾರುಕಟ್ಟೆಗಳಲ್ಲಿ ಮಾರಾಟ ಕಡ್ಡಾಯಗೊಳಿಸಬೇಕು. ಎಪಿಎಂಸಿಗಳಲ್ಲಿ ಜಾನುವಾರುಗಳಿಗೆ ನೆರಳು, ಮೇವು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ, ಸಂಜೀವ ಡೊಂಗರಗಾಂವಿ, ಶೇಖರ ಅಕ್ಕಣ್ಣವನರ, ಶಂಕರ ಢವಳಿ ಮತ್ತಿತರರು ಪಾಲ್ಗೊಂಡಿದ್ದರು.