ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡೆಗೆ ಆಗ್ರಹ: ಕಾರ್ಮಿಕ ಸಂಘ

| Published : Jun 24 2024, 01:32 AM IST

ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡೆಗೆ ಆಗ್ರಹ: ಕಾರ್ಮಿಕ ಸಂಘ
Share this Article
  • FB
  • TW
  • Linkdin
  • Email

ಸಾರಾಂಶ

ಶಹಾಪುರದ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಸರ್.ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ತಹಸೀಲ್ದಾರ್ ಮುಖಾಂತರ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಶಹಾಪುರಕಡಿಮೆ ಶುಲ್ಕ ಪಡೆದು ಉತ್ತಮ ಶಿಕ್ಷಣ ನೀಡಬೇಕಾದ ವಿದ್ಯಾಸಂಸ್ಥೆಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ, ಮನಬಂದಂತೆ ಡೊನೇಷನ್ ಪಡೆಯುತ್ತಿದ್ದಾರೆ. ಕ್ರಮ ಜರುಗಿಸಬೇಕಾದ ಇಲಾಖಾಧಿಕಾರಿಗಳು ಖಾಸಗಿ ಶಾಲೆಗಳ ಪರವಾಗಿ ನಿಂತಿರುವುದು ದುರದೃಷ್ಟಕರ ಸಂಗತಿ. ಖಾಸಗಿ ಶಾಲೆಗಳ, ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ ವತಿಯಿಂದ ತಹಸೀಲ್ದಾರ್‌ ಮುಖಾಂತರ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಪ್ರದೀಪ್ ಅಣಬಿ, ಪ್ರಸ್ತುತ 2024-25ನೇ ಶೈಕ್ಷಣಿಕ ಶಾಲಾ ಪ್ರವೇಶಾತಿ ಆರಂಭವಾಗಿದ್ದು, ನಗರದ ವಿವಿಧ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಜಾಸ್ತಿಯಾಗಿದೆ. ಬಡವರ ಮತ್ತು ಮಧ್ಯಮಸ್ಥರ ಮಕ್ಕಳು ಪ್ರವೇಶಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಶೈಕ್ಷಣಿಕ ಇಲಾಖೆ ಈ ಕುರಿತು ಪರಿಶೀಲನೆ ನಡೆಸಿ, ಹೆಚ್ಚಿನ ಡೊನೇಷನ್ ಪಡೆಯುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಈ ಕುರಿತು ಜಿಲ್ಲಾಡಳಿತ ಪರಿಶೀಲನೆ ನಡೆಸಬೇಕಿದೆ. ಸರ್ಕಾರ ನಿಗದಿಪಡಿಸಿದ ಶುಲ್ಕ ಮಾತ್ರ ಪಡೆಯುವಂತೆ ಕಠಿಣ ಆಜ್ಞೆ ನೀಡಬೇಕೆಂದು ಸಂಘ ಮನವಿ ಮಾಡಿದೆ. ಅಲ್ಲದೆ ಈ ಕುರಿತು ಈಗಾಗಲೇ ಕ್ಷೇತ್ರ ಶಿಕ್ಷಣ ಅಧಿಕಾರಿಗಳು, ಡಿಡಿ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಸಂಗಮೇಶ ಬೇವಿನಹಳ್ಳಿ, ದೇವರಾಜ, ಸಿದ್ದಪ್ಪ, ಭೋಜಪ್ಪ, ಆಂಜನೇಯ ಇಮ್ಲಾಪುರ ಇತರರಿದ್ದರು.23ವೈಡಿಆರ್‌5 :

ಶಹಾಪುರದ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಸರ್.ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ತಹಸೀಲ್ದಾರ್ ಮುಖಾಂತರ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.