ಡೊನೇಷನ್‌ ಹಾವಳಿ ತಡೆಗೆ ಆಗ್ರಹ

| Published : May 23 2024, 01:09 AM IST

ಸಾರಾಂಶ

2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿವೆ. ಆದರೆ, ಡೊನೇಷನ್ ಹಾವಳಿ ಹೆಚ್ಚಾಗಿದ್ದು ಇದನ್ನು ತಡೆಗಟ್ಟಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದಿಂದ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿವೆ. ಆದರೆ, ಡೊನೇಷನ್‌ ಹಾವಳಿ ಹೆಚ್ಚಾಗಿದ್ದು ಇದನ್ನು ತಡೆಗಟ್ಟಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಘಟಕದಿಂದ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಇಲಾಖೆಯ ಸುತ್ತೋಲೆಯ ಪ್ರಕಾರ ಪ್ರವೇಶ ಪ್ರಕ್ರಿಯೆ ನಡೆಸದೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿಕೊಂಡಂತೆ ವರ್ತಿಸುತ್ತಿದ್ದಾರೆ. ಇಲಾಖೆಯ ನಿಯಮಾನುಸಾರ ರೋಸ್ಟರ್ ಪಾಲಿಸದೇ ನಿಯಮ ಮೀರಿ ಬೇಕಾಬಿಟ್ಟಿಯಾಗಿ ಡೊನೇಷನ್ ಹೆಸರಿನಲ್ಲಿ ಹಣ ಸುಲಿಗೆ ಮಾಡುತ್ತಿದ್ದಾರೆ. ಇದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ ಅಜಮನಿ, ಮುಖಂಡರಾದ ಆನಂದ ಮುದೂರ, ಮಾದೇಶ ಛಲವಾದಿ, ಯಾಶಿನ್ ಇನಾಮದಾರ, ಯುವರಾಜ್ ಓಲೇಕಾರ್, ಶಂಕರ, ಅಜಯ್ ರಾಥೋಡ್, ಮಹಾಂತೇಶ್ ಛಲವಾದಿ, ಯಮನುರಿ ಮಾದರ್, ಮುಂತಾದವರು ಉಪಸ್ಥಿತರಿದ್ದರು.