ಎಸ್‍ಐಆರ್ ಅವೈಜ್ಞಾನಿಕ ಮತದಾರರ ಪಟ್ಟಿಯ ಪರಿಷ್ಕರಣೆ ನಿಲ್ಲಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನೆಡೆಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಯನ್ನು ಚುನಾವಣಾ ಆಯೋಗ ನಿಲ್ಲಿಸುವಂತೆ ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲಿಸಲಾಯಿತು.ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಚುನಾವಣಾ ಆಯೋಗದ ಮತಪಟ್ಟಿ ಪರಿಷ್ಕರಣೆಯ

ವಿರುದ್ಧ ಧಿಕ್ಕಾರಗಳನ್ನು ಕೂಗಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಜೆ.ಯಾದವರೆಡ್ಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲು ಹೊರಟಿರುವ ಕೇಂದ್ರ ಚುನಾವಣಾ ಆಯೋಗದಿಂದ ಸಣ್ಣಪುಟ್ಟ ತಪ್ಪುಗಳನ್ನು ಹುಡುಕಿ ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರ ಹಾಕುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.

ಅನೇಕ ರಾಜ್ಯಗಳಲ್ಲಿ ಈಗಾಗಲೆ ಪರಿಷ್ಕರಣೆಯಾಗಿರುವುದರಿಂದ 12 ಕೋಟಿ ರು. ಮತದಾರರು ಮತಪಟ್ಟಿಯಿಂದ ವಂಚಿತರಾಗಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿರುವುದು ಕೂಡಲೆ ನಿಲ್ಲಬೇಕು. ದೇಶದ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಅರಿವು ಮೂಡಿಸುತ್ತ ಬರುತ್ತಿದ್ದ ಸರ್ಕಾರ ಏಕಾಏಕಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮತದಾರರನ್ನು ಗುರಿಯಾಗಿಸಿಕೊಂಡು ಮತಪಟ್ಟಿಯಿಂದ ಹೊರತೆಗೆಯುವ ಹುನ್ನಾರ ನಡೆಸುತ್ತಿದೆ. ಚುನಾವಣಾ ಆಯೋಗ ಮತಪಟ್ಟಿ

ಪರಿಷ್ಕರಣೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ನಿಜವಾದ ಮತದಾರರ ಹೆಸರುಗಳು ಮತಪಟ್ಟಿಯಲ್ಲಿ ಇಲ್ಲವಾದರೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ.

ಬಹುಮುಖ್ಯವಾಗಿ ರೇಷನ್ ಕಾರ್ಡ್‍ಗಳು ಇಲ್ಲದಂತಾಗುತ್ತದೆ. ಬ್ಯಾಂಕ್ ಅಕೌಂಟ್ ಹ್ಯಾಕ್ ಆಗುತ್ತದೆ. 324ನೇ ವಿಧಿಯ ಪ್ರಕಾರ ಚುನಾವಣಾ ಆಯೋಗಕ್ಕೆ ಮತಪಟ್ಟಿ ಪರಿಷ್ಕರಣೆ ಮಾಡುವ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದಕ್ಕೆ ನಮ್ಮದೇನು ಅಭ್ಯಂತರವಿಲ್ಲ. ಆದರೆ ಇಲ್ಲಸಲ್ಲದ ಕಾರಣಗಳನ್ನು ಹುಡುಕಿ ಅರ್ಹರನ್ನು ಮತಪಟ್ಟಿಯಿಂದ ಹೊರ ಹಾಕುವುದು ಯಾವ ನ್ಯಾಯ

ಎಂದು ಪ್ರಶ್ನಿಸಿದರು?

ನ್ಯಾಯವಾದಿ ಸಿ.ಶಿವುಯಾದವ್ ಮಾತನಾಡಿ, ಈ ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯೂ ಭಾರತದ ನಿವಾಸಿ ಎನ್ನುವುದನ್ನು ಸಾಬೀತು ಪಡಿಸುವ ಅಧಿಕಾರ ಚುನಾವಣಾ ಆಯೋಗಕ್ಕಿಲ್ಲ. ಎಸ್‍ಐಆರ್ ಮೂಲಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವುದರ ಹಿಂದೆ ಕೇಂದ್ರ ಸರ್ಕಾರದ ಕುತಂತ್ರವಿದೆ. ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಾನೂನು ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ನಜ್ಮತಾಜ್, ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೋಹಿದ್ದೀನ್, ಸೈಯದ್ ಖುದ್ದೂಸ್, ಪಿ.ಬಾಬು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತ ನಂದಿನಿಗೌಡ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ಬಸಮ್ಮ, ನಗರಸಭೆ ಮಾಜಿ ಸದಸ್ಯ ಸಿ.ಟಿ.ರಾಜೇಶ್, ಜನಶಕ್ತಿ ರಾಜ್ಯ ಸಮಿತಿ ಸದಸ್ಯ ಟಿ.ಶಫಿವುಲ್ಲಾ, ನಿವೃತ್ತ ಪ್ರಾಚಾರ್ಯ ಶಿವಕುಮಾರ್, ಗ್ಯಾರೆಂಟಿ ಯೋಜನೆ ಅನುಷ್ಟಾನಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಆರ್.ಶಿವಣ್ಣ, ಪುರುಷೋತ್ತಮ, ಪಿ.ಸುಬಾನುಲ್ಲಾ, ಸಮಾಜವಾದಿ ಪಾರ್ಟಿಯ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಿಕಾಂತ್, ಗುರುನಾಥ್, ರೈತ ಮುಖಂಡರುಗಳಾದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ನ್ಯಾಯವಾದಿ ಮಾಲತೇಶ್ ಅರಸ್, ಮಾನವ ಬಂಧುತ್ವ ವೇದಿಕೆ ಜಿಲ್ಲಾಧ್ಯಕ್ಷೆ ಬೈಲಮ್ಮ, ಬಸವರಾಜ್, ಪ್ರಭಾವತಿ, ಸುಧಾ, ದಲಿತ ಮುಖಂಡರುಗಳಾದ ಬಿ.ರಾಜಣ್ಣ ಜೆಜೆ.ಹಟ್ಟಿ, ರಾಜಪ್ಪ,

ಎಸ್‌ಡಿಪಿಐ ಪದಾಧಿಕಾರಿಗಳು ಸೇರಿ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.