ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಆಗ್ರಹ

| Published : Mar 12 2024, 02:04 AM IST

ಸಾರಾಂಶ

ಅಥಣಿ: ತಾಲೂಕಿನ ತೆಲಸಂಗ ಮತ್ತು ಅನಂತಪುರ ಹೋಬಳಿ ಮಟ್ಟದ ವಿವಿಧ ಗ್ರಾಮಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲಿದವರಿದ್ದು, ತೋಟದ ವಸತಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಜಿಲ್ಲಾಡಳಿತ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೂಡಲೇ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮಹದೇವ ಮಡಿವಾಳ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ತಾಲೂಕಿನ ತೆಲಸಂಗ ಮತ್ತು ಅನಂತಪುರ ಹೋಬಳಿ ಮಟ್ಟದ ವಿವಿಧ ಗ್ರಾಮಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲಿದವರಿದ್ದು, ತೋಟದ ವಸತಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಜಿಲ್ಲಾಡಳಿತ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೂಡಲೇ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮಹದೇವ ಮಡಿವಾಳ ಆಗ್ರಹಿಸಿದರು.ತಾಲೂಕು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಕೃಷ್ಣಾ ನದಿಯಲ್ಲಿ ದಿನದಿಂದ ದಿನಕ್ಕೆ ನೀರು ಕಡಿಮೆಯಾಗುತ್ತಿದ್ದು, ಮಹಾರಾಷ್ಟ್ರದಿಂದ ಎರಡು ಟಿಎಂಸಿ ನೀರನ್ನು ನದಿಗೆ ಹರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು. ಕೂಡಲೇ ಗೋ ಶಾಲೆಗಳನ್ನು ಆರಂಭಿಸಬೇಕು, ತೋಟದ ವಸತಿಗಳಿಗೆ ಟ್ಯಾಂಕರ್‌ಗಳ ಮೂಲಕ ನೀರನ್ನು ಒದಗಿಸಬೇಕು ಎಂದು ತಾಲೂಕು ಅಧಿಕಾರಿಗಳನ್ನು ಒತ್ತಾಯಿಸಿದರು. ನಂತರ ಹೆಸ್ಕಾಂ ಅಧಿಕಾರಿಗಳಿಗೆ ಪ್ರತ್ಯೇಕ ಮನವಿ ಸಲ್ಲಿಸಿ ದಿನದ 7 ಗಂಟೆ ವಿದ್ಯುತ್ ನೀಡುವಂತೆ ಒತ್ತಾಯಿಸಿದರು.ಈ ಸಂದರ್ಭದಲ್ಲಿ ರಮೇಶ್ ಮಡಿವಾಳ, ಯಳಗೊಂಡ, ಪಿಂಟು ಕಬಡಗಿ, ದುಂಡಪ್ಪ ತನಂಗಿ, ಮೊಹಮ್ಮದ್ ಜಮಾದಾರ, ಪ್ರಕಾಶ್ ಜೋಶಿ, ಕಿರಣ್ ಮಸಾಲೆ, ಅಡಿವಪ್ಪ ಅಜೂರ, ಮುರಿಗೆಪ್ಪ ಹೊನವಾಡ, ಬಸಪ್ಪ ದೊಡವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.