ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗ
ರಾಜ್ಯದಾದ್ಯಂತ ವಕ್ಫ್ ಆಸ್ತಿ ಸಂಬಂಧಿಸಿದ ಗದ್ದಲಗಳು ಮಾರ್ದನಿಸಿದ್ದು, ರೈತರು ಒಳಗೊಂಡಂತೆ ಹಿಂದೂ, ಕ್ರೈಸ್ತ ಮುಸ್ಲಿಂ ಬಾಂಧವರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕಾನೂನು ಜಾರಿಗೆ ತರಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತ ಭೂಮಿಗಳ ಮೇಲೆ ವಕ್ಫ್ ಹಿಡಿತ ಸಾಧಿಸುವುದನ್ನು ತಡೆಯಬೇಕು ಎಂದು ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.ವಕ್ಫ್ ಆಸ್ತಿ , ರೈತರ , ಶ್ರೀಸಾಮಾನ್ಯರ ಭೂಮಿಯ ಅತಿಕ್ರಮಣದ ವಿವರಗಳು ಪ್ರತಿನಿತ್ಯ ಹಲವು ಜಿಲ್ಲೆಗಳಿಂದ ಹೊರ ಬರುತ್ತಿದೆ. ವಿಜಯಪುರ, ಹಾವೇರಿ , ಬಾಗಲಕೋಟೆ , ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ರೈತರು, ಶ್ರೀಸಾಮಾನ್ಯರು ಇದ್ದಾರೆ . ಸಂಬಂಧಿತ ಸಚಿವರು ವಕ್ಫ್ ಆಸ್ತಿ ಅತಿಕ್ರಮಣದ ನೆಪದಲ್ಲಿ ರೈತರಿಗೆ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದು ಸಮಸ್ಯೆ ಉಲ್ಬಣಿಸಲು ಕಾರಣವಾಗಿದೆ ಎಂದು ಹೇಳಿದರು.
ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ನಡೆಸಬೇಕು. ಸಂಪುಟದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದರ ಮೂಲಕ ವಕ್ಫ್ ಆಕ್ರಮಣ ನೀತಿಗೆ ತಡೆ ನೀಡಬೇಕು. ಅಗತ್ಯ ಬಂದಲ್ಲಿ 1975 ರ ಗೆಜೆಟ್ ನೋಟಿಫಿಕೇಶನ್ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಹಾಲಿ ರೈತರಿಗೆ ನೀಡಿರುವ ನೋಟಿಸ್ ವಾಪಸ್ಸು ಪಡೆದಿರಬಹುದು. ಇದು ತಾತ್ಕಾಲಿಕ ಕ್ರಮವಾಗುತ್ತದೆ. ಮುಂದೆ ಬರುವ ಸರ್ಕಾರಗಳು ಇದೇ ನೀತಿ ಅನುಸರಿಸುತ್ತಾರೆಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಹಾಗಾಗಿ ಇದಕ್ಕೊಂದು ಶಾಶ್ವತ ಪರಿಹಾರ ಈಗಲೇ ಕಂಡು ಹಿಡಿಯಬೇಕು. ಶ್ರೀ ಸಾಮಾನ್ಯರ ಆತಂಕವನ್ನು ದೂರ ಮಾಡುವತ್ತ ರಾಜ್ಯ ಸರ್ಕಾರ ಕಟ್ಟುನಿಟ್ಟಾದ, ಸ್ಪಷ್ಟವಾದ ಕ್ರಮ ಕೈಗೊಳ್ಳಬೇಕು ಎಂದು ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ ಭಾನುವಾರ ಚಿತ್ರದುರ್ಗದಲ್ಲಿ ಬಿಡುಗಡೆ ಮಾಡಲಾದ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))